ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಸಂಸ್ಥಾಪಕ ನಾಯಕ ಡಾ.ಟಿ.ಎಂ.ಎ. ಪೈ ಅವರ 125ನೆಯ ಜನ್ಮದಿನಾಚರಣೆ ಅಂಗವಾಗಿ ನಗರದ ಜನರಿಗಾಗಿ ಮಣಿಪಾಲ ಆರೋಗ್ಯ ಕಾರ್ಡ್ #ManipalHealthCard ನೊಂದಾವಣಿಗೆ ಇಂದು ಚಾಲನೆ ನೀಡಲಾಗಿದೆ.
ಈ ಕುರಿತಂತೆ ಮಾತನಾಡಿದ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ #Manipal ವ್ಯವಸ್ಥಾಪಕರಾದ ಮೋಹನ್ ಶೆಟ್ಟಿ, ಈ ವರ್ಷ ನಮ್ಮ ದೂರದೃಷ್ಟಿಯ ಸಂಸ್ಥಾಪಕ ನಾಯಕ ಡಾ.ಟಿ.ಎಂ.ಎ. ಪೈ #DRTMAPai ಅವರ 125ನೇ ವರ್ಷದ ಜನ್ಮದಿನಾಚರಣೆಯನ್ನು ನಾವು ಆಚರಿಸುತ್ತಿದ್ದೇವೆ. ಅವರ ಉದಾತ್ತ ಕಾರ್ಯವನ್ನು ಸ್ಮರಿಸುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಭಾರತೀಯ ಆರೋಗ್ಯ ವ್ಯವಸ್ಥೆಯನ್ನು ಸಮಾಜಕ್ಕೆ ಸುಲಭವಾಗಿ ದೊರೆಯುವಂತೆ ಮಾಡಿದ ಸ್ಪೂರ್ತಿದಾಯಕ ಅಪರೂಪದ ನಾಯಕ ಡಾ. ಟಿ.ಎಂ.ಎ. ಪೈ. ಮಣಿಪಾಲ್ ಆರೋಗ್ಯ ಕಾರ್ಡ್ 2023ರ ನೋಂದಣಿ ಪ್ರಾರಂಭವಾಗಿದೆ ಎಂದರು.
ಕಾರ್ಡ್ ಪಡೆಯುವುದು ಹೇಗೆ?
ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯ್ತಿಯ ರೂಪದಲ್ಲಿ ಹಿಂಪಡೆಯಬಹುದು. ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ ಎಂಬುದು ಮಣಿಪಾಲ್ ಆರೋಗ್ಯಕಾರ್ಡ್’ನ ಧ್ಯೇಯ ವಾಕ್ಯ.

ಆರೋಗ್ಯ ಕಾರ್ಡ್’ನ ಶುಲ್ಕ ಎಷ್ಟು?
ಮಣಿಪಾಲ್ ಆರೋಗ್ಯ ಕಾರ್ಡ್ 2023ರ ಯೋಜನೆಯು ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ 300/-, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ 600/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) 750/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ 500-, ಕುಟುಂಬಕ್ಕೆ 800/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ 950/- ಆಗಿರುತ್ತದೆ.

- ಹೊರ ರೋಗಿ ವಿಭಾಗದಲ್ಲಿ, ಒಳ ರೋಗಿ ವಿಭಾಗದಲ್ಲಿ, ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆ ಯಲ್ಲಿ ಶೇಕಡಾ 50 ರಿಯಾಯ್ತಿ
- ಪ್ರಯೋಗಾಲಯ ಪರೀಕ್ಷೆ ಯಲ್ಲಿ ಶೇಕಡಾ 30 ರಿಯಾಯ್ತಿ
- ಸಿಟಿಎಂಆರ್’ಐ, ಅಲ್ಟ್ರಾಸೌಂಡ್’ಗಳಲ್ಲಿ ಶೇಕಡಾ 20 ರಿಯಾಯ್ತಿ
- ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇಕಡಾ 20 ರಿಯಾಯ್ತಿ
- ಔಷಧಾಲಯಗಳಲ್ಲಿ ಶೇಕಡಾ 12ರವರೆಗೆ ರಿಯಾಯ್ತಿ
- ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇಕಡಾ 25 ರಿಯಾಯ್ತಿ
ಯಾರಿಗೆಲ್ಲಾ ಅನ್ವಯಿಸುತ್ತದೆ?
ಕಾರ್ಡ್ ಹೊಂದಿರುವವರು ಕರಾವಳಿ ಕರ್ನಾಟಕ ಮತ್ತು ಗೋವಾದ ಮಣಿಪಾಲ್ ಗ್ರೂಪ್ ಆಸ್ಪತ್ರೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಇದರಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎ, ಪೈ ಆಸ್ಪತ್ರೆ ಉಡುಪಿ ಮತ್ತು ಡಾ.ಟಿ.ಎಂ.ಎ, ಪೈ ರೋಟರಿ ಆಸ್ಪತ್ರೆ ಕಾರ್ಕಳ, ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು ಮತ್ತು ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ ಕಟೀಲ್ ಮತ್ತು ಮಣಿಪಾಲ್ ಆಸ್ಪತ್ರೆ ಗೋವಾ, ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ದಂತ ಚಿಕಿತ್ಸಾ ಆಸ್ಪತ್ರೆಗಳಲ್ಲಿ ರಿಯಾಯ್ತಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಆರೋಗ್ಯ ಕಾರ್ಡನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು.

ಸಾರ್ವಜನಿಕರು ಮಣಿಪಾಲ್ ಆರೋಗ್ಯಕಾರ್ಡ್ ಅನ್ನು ಎಲ್ಲಾ ಅಧಿಕೃತ ಪ್ರತಿನಿಧಿಗಳಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ. 9980854700/ 08202923748 ಗೆ ಸಂಪರ್ಕಿಸಬಹುದು. ಪ್ರತಿನಿಧಿಯಾದ ಪ್ರವೀಣ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post