ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಆಗಸ್ಟ್-12 ಮತ್ತು 14 ರಂದು ವಿದ್ಯಾನಗರ ಮುಖ್ಯ ರಸ್ತೆಯಲ್ಲಿ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಭಾಗದ ಬಹಳಷ್ಟು ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ.
ವಿದ್ಯಾನಗರ, ಗಣಪತಿ ಲೇಔಟ್, ಪುರಲೆ, ಚಿಕ್ಕಲ್, ಗುರುಪುರ, ವೆಂಕಟೇಶನಗರ, ಸಹ್ಯಾದ್ರಿ ಕಾಲೇಜ್, ಶಾಂತಮ್ಮ ಲೇಔಟ್, ಗುಡ್ಡೇಕಲ್, ಸುಬ್ಬಯ್ಯ ಮೆಡಿಕಲ್ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂದು ಬೆಳಗ್ಗೆ 09.30 ರಿಂದ ಸಂಜೆ 6.00 ರವರೆಗೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನ.ಉ.ವಿ.-1ರ ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿರುತ್ತಾರೆ.
Get In Touch With Us info@kalpa.news Whatsapp: 9481252093

















