ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಮೇ-21 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ಶಿವಮೊಗ್ಗ ನಗರದ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5ರಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ವಿ.ವಿ ಕೇಂದ್ರದ ವ್ಯಾಪ್ತಿ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಶರಾವತಿ ನಗರ ಎ ಬ್ಲಾಕ್, ಆಯುರ್ವೇದ ಕಾಲೇಜ್, ನರ್ಸ್ ಕ್ವಾರ್ಟಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post