ಕಲ್ಪ ಮೀಡಿಯಾ ಹೌಸ್
ಮಂತ್ರಾಲಯ: ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಮಂತ್ರಾಲಯ ಶ್ರೀ ರಾಘವೇಂದ್ರ ತೀರ್ಥ ಶ್ರೀಪಾದಂಗಳವರ ಮೂಲಬೃಂದಾವನ ದರ್ಶನಕ್ಕೆ ಭಕ್ತಾದಿಗಳಿಗೆ ಜೂನ್ 22ರಿಂದ ಅವಕಾಶ ಕಲ್ಪಿಸಲಾಗಿದೆ.
ಆರೋಗ್ಯ ಇಲಾಖೆಯ ನೂತನ ಮಾರ್ಗಸೂಚಿಯನ್ವಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆದೇಶದಂತೆ ಭಕ್ತರಿಗೆ ರಾಯರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಕೋವಿಡ್ ನಿಯಮಾವಳಿಗಳ ಪಾಲನೆ ಕಡ್ಡಾಯವಾಗಿರುತ್ತದೆ.ಪ್ರತಿದಿನ ಬೆಳಗ್ಗೆ 6ರಿಂದ 2 ಹಾಗೂ 4ರಿಂದ ರಾತ್ರಿ 9ಗಂಟೆಯವರೆಗೂ ದರ್ಶನಕ್ಕೆ ಅವಕಾಶವಿರುತ್ತದೆ.
ಪ್ರತ್ಯಕ್ಷವಾಗಿ ಮಂತ್ರಾಲಯಕ್ಕೆ ಆಗಮಿಸಲಾರದವರು ಆನ್ ಲೈನ್ ಮೂಲಕ ದರ್ಶನ ಪಡೆದು, ಸೇವೆಗಳನ್ನು ಸಲ್ಲಿಸಬಹುದಾಗಿದೆ.
ಆನ್ ಲೈನ್ ಸೇವೆಗಾಗಿ ಕ್ಲಿಕ್ ಮಾಡಿ: https://srsmatha.org/online
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post