ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ 66/66 ಕೆವಿ ವಿದ್ಯುತ್ ವಿತರಣಾ ಮಾರ್ಗದ ತುರ್ತು ನಿರ್ವಹಣಾ ಕಾಮಗಾರಿ ಮಾಡುವುದರಿಂದ ನ.21 ಮತ್ತು ನ.22 ರಂದು ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ನ.21 ಹಾಗೂ 22ರಂದು ಎರಡು ದಿನಗಳು ಬೆಳಿಗ್ಗೆ 7.30 ರಿಂದ ಸಂಜೆ 5 ಗಂಟೆಯವರೆಗೆ ಗ್ರಾಮಾಂತರ ಪ್ರದೇಶವಾದ ಬದನೆಹಾಳ್, ಬೆಳ್ಳಿಗೆರೆ, ಅತ್ತಿಗುಂದ, ಬಂಡಿಗುಡ್ಡ, ಹೊಸಹಳ್ಳಿ, ಕಲ್ಪನಹಳ್ಳಿ. ಕೂಡ್ಲಿಗೆರೆ, ಅರಳಿಹಳ್ಳಿ, ಗುಡ್ಡದನೇರೆಳೇಕೆರೆ, ಕೊಮಾರನಹಳ್ಳಿ, ಜಯನಗರ, ಸೀತಾರಾಮಪುರ, ಕಲ್ಲಾಪುರ, ದಾನವಾಡಿ, ಕೋಡಿಹಳ್ಳಿ, ಡಿ.ಬಿ.ಹಳ್ಳಿ, ಅರಕೆರೆ, ಮಾರಶೆಟ್ಟಿಹಳ್ಳಿ, ಕಲ್ಲಿಹಾಳ್, ಅರಬಿಳಚಿ, ತಿಮ್ಲಾಪುರ ಮತ್ತು ಸುತ್ತಮುತ್ತ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ನ.22ರಂದು ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಮಾಚೇನಹಳಿಯ ಐಪಿಡಿಎಸ್ ಕಾಮಗಾರಿ ಕೈಗೊಳ್ಳುವುದರಿಂದ ನ: 22 ರಂದು ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಡೈರಿ ವೃತ್ತ, ವಿಶ್ವೇಶ್ವರಯ್ಯನಗರ, ಶಿವರಾಮನಗರ, ಬಿಎಚ್ ರಸ್ತೆ, ಕೆಎಸ್ಆರ್ಪಿ ವಸತಿ ಗೃಹಗಳು, ಜಯಂತಿ ಗ್ರಾಮ, ರಾಮಮೂರ್ತಿ ಮಿನರಲ್ಸ್, ಬಾಳೇನಹಳ್ಳಿ, ಗೌಡ್ರಕೊಪ್ಪ, ವೀರಭದ್ರ ಕಾಲೋನಿ, ಜೊನ್ನವಿಲೆ, ಶೆಟ್ಟಿಹಳ್ಳಿ, ಮಾಚೇನಹಳ್ಳಿ, ಮಲ್ನಾಡ್ ಆಸ್ಪತ್ರೆ, ಅರೇಕೊಪ್ಪ, ಬಿದರೆ, ನಿದಿಗೆ, ದುಮ್ಮಳ್ಳಿ, ಓತಿಘಟ್ಟ, ಸೋಗಾನೆ, ಆಚಾರಿ ಕ್ಯಾಂಪ್, ರೆಡ್ಡಿ ಕ್ಯಾಂಪ್, ಹೆರೆಕಟ್ಟೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ಇಲಾಖೆ ಕೋರಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post