ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಮೇ-29 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ಶಿವಮೊಗ್ಗ ನಗರದ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-4ರಲ್ಲಿ ತುರ್ತು ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ವಿ.ವಿ ಕೇಂದ್ರದ ವ್ಯಾಪ್ತಿ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಕುವೆಂಪು ರಸ್ತೆ, ಮಿಷನ್ ಕಾಂಪೌಂಡ್, ಕ್ಲಿಫ್ ಎಂಬೆಸ್ಸಿ, ಹೊಸಮನೆ, ಅಶೋಕನಗರ, ಎಆರ್’ಬಿ ಕಾಲೋನಿ, ಸಾಗರ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
Get in Touch With Us info@kalpa.news Whatsapp: 9481252093







Discussion about this post