ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಮೇ-27 ರಂದು ಮಧ್ಯಾಹ್ನ 12 ರಿಂದ ಸಂಜೆ 06 ಗಂಟೆಯವರೆಗೆ ಶಿವಮೊಗ್ಗ ತಾಲೂಕು ಕುಂಸಿ, ಅಯನೂರು ಹಾಗೂ ಹಾರ್ನಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ನೂತನ 110 ಕೆವಿ ಬ್ರೇಕರ್ ಅಳವಡಿಸುವ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ವಿವಿ ಕೇಂದ್ರದ ವ್ಯಾಪ್ತಿ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಕುಂಸಿ, ಬಾಳೆಕೊಪ್ಪ, ಜೋರಡಿ, ತುಪ್ಪೂರು, ಕೋಣಿಹೊಸೂರು, ಹೊರಬೈಲು ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಹಾಗೂ ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಇನ್ನಿತರೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕುಂಸಿ ಮೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post