ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಿಜಾಬ್-ಕೇಸರಿ ವಿವಾದ ತಾರಕಕ್ಕೆ ಏರಿ, ಕೆಲವು ಕಡೆಗಳಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದ್ದು, ಇದು ಒಂದರಿಂದ ಎಂಟನೆಯ ತರಗತಿವರೆಗೂ ಅನ್ವಯಿಸುವುದಿಲ್ಲ.ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಎಸ್.ಎನ್. ಪದ್ಮಿನಿ ಅವರು ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಶಾಲಾ ಕಾಲೇಜುಗಳಲ್ಲಿ ಅಲ್ಲಲ್ಲಿ ಬಿಗುವಿನ ವಾತಾವರಣವಿರುವುದನ್ನು ಗಮನಿಸಿ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಫೆ.9, 10 ಹಾಗೂ 11 ರಂದು ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 9, 10ನೆಯ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ರಜೆಯನ್ನು ಘೋಷಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಮಾಧ್ಯಮಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಎಂದು ಬಿತ್ತರವಾದ ಹಿನ್ನೆಲೆಯಲ್ಲಿ ಎಲ್ಲ ತರಗತಿಗಳಿಗೂ ರಜೆ ಎಂಬ ಸಂದೇಶ ರವಾನೆಯಾಗಿದ್ದು, ಪೋಷಕರಲ್ಲಿ ಗೊಂದಲ ಉಂಟಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post