ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಲಾಕ್’ಡೌನ್ ಘೋಷಣೆ ಮಾಡಿರುವ ಕಾರಣ ಜಿಲ್ಲೆಯಲ್ಲಿ ಯಾವುದೇ ರೀತಿಯ ಸಾಮೂಹಿಕ ಪ್ರಾರ್ಥನೆ ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸೂಚಿಸಿದ್ದಾರೆ.
ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಂದಿರ, ಮಸೀದಿ, ಚರ್ಚ್ ಸೇರಿದಂತೆ ಎಲ್ಲಾ ಪ್ರಾರ್ಥನಾಲಯಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ ಎಂದು ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಈ ಆದೇಶವನ್ನು ಮೀರಿ ಪ್ರಾರ್ಥನಾಲಯಗಳನ್ನು ತೆರೆದಿರುವುದು ಕಂಡು ಬಂದರೆ ಅಂತಹ ಪ್ರಾರ್ಥನಾಲಯಗಳ ಆಡಳಿತ ಸಮಿತಿ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
Get in Touch With Us info@kalpa.news Whatsapp: 9481252093

















