ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಮೇ-19 ರಂದು ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆಯವರೆಗೆ ಶಿವಮೊಗ್ಗ ತಾಲೂಕು ಗಾಜನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ವಿ.ವಿ ಕೇಂದ್ರದ ವ್ಯಾಪ್ತಿ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಗಾಜನೂರು ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಸಿದ್ದರಹಳ್ಳಿ, ಮಂಡೇನಕೊಪ್ಪ, ಶ್ರೀಕಂಠಪುರ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
Get in Touch With Us info@kalpa.news Whatsapp: 9481252093















