ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಜುಲೈ 25ರಂದು ಬೆಳಿಗ್ಗೆ 09ರಿಂದ ಸಂಜೆ 6 ಗಂಟೆಯವರೆಗೆ ಶಿವಮೊಗ್ಗ ತಾಲೂಕಿನ ಕುಂಸಿ ಗ್ರಾಮದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೆûಮಾಸಿಕ ನಿರ್ವಹಣಾ ಕಾರ್ಯ ಹಾಗೂ ತುರ್ತು ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಗ್ರಾಮಗಳಲ್ಲಿ ವಿದ್ಯುತ್ ಇರುವುದಿಲ್ಲ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ
ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣೆಹೊಸೂರು, ಹೊರಬೈಲು ಹಾಗೂ ಸುತ್ತಮುತ್ತಲ ಗ್ರಾಮಗಳು, ಹಾರ‌್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳು ಮತ್ತು ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮುತ್ತಲಿ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪಾಲನೆ ಮತ್ತು ನಿರ್ವಹಣೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
Get In Touch With Us info@kalpa.news Whatsapp: 9481252093















