ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಹೊಳಲೂರಿನ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರಂತರ ಜ್ಯೋತಿ ಎಬಿಸಿ ಕೇಬಲ್ ಅಳವಡಿಸುವ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಜನವರಿ 30ರಿಂದ ಫೆಬ್ರವರಿ 15ರವರೆಗೆ ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 6ರವರೆಗೆ ಈ ಪ್ರದೇಶದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಂತೇಕಡೂರು, ಶ್ರೀರಾಮನಗರ, ರಾಮಪುರ, ಭಂಡಾರಿ ಕ್ಯಾಂಪ್, ಕೊರಲಹಳ್ಳಿ, ಕಾಚಿನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ರವರು ತಿಳಿಸಿದ್ದಾರೆ.
ವಿದ್ಯುತ್ ಸಮಸ್ಯೆಯೇ?: ಫೋನ್ ಮಾಡಿ
ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಶಿವಮೊಗ್ಗ ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿನ ವಿದ್ಯುತ್ ಗ್ರಾಹಕರ ಕುಂದು-ಕೊರತೆಗಳನ್ನು ಪರಿಹರಿಸುವ ಉದ್ದೇಶದಿಂದ ಜನವರಿ 30ರಂದು ಬೆಳಿಗ್ಗೆ 11ರಿಂದ ಧ್ಯಾಹ್ನ 1ಗಂಟೆಗೆರವರೆಗೆ ದೂರವಾಣಿಯಲ್ಲಿ ಅಹವಾಲುಗಳನ್ನು ಸ್ವೀಕರಿಸಿ, ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲಿದೆ. ಬಾಧಿತರು ಮೊ.9448289506 ಸಂಖ್ಯೆಗೆ ಕರೆಮಾಡಿ ಸಮಸ್ಯೆಗಳನ್ನು ದಾಖಲಿಸುವಂತೆ ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ರವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post