ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಕೆಯ ಸ್ಮಾರ್ಟ್‌ಸಿಟಿ ಯೋಜನೆಯ ಪೂರಕ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.31ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಪಿಯರ್ ಲೈಟ್ ಕೈಗಾರಿಕೆ, ಎನ್.ಟಿ.ರಸ್ತೆ, ಬಿ.ಹೆಚ್.ರಸ್ತೆ, ಟೆಂಪೋಸ್ಟ್ಯಾಂಡ್ ಡೌನ್, ಜೆ.ಸಿ.ನಗರ, ಮಿಳ್ಳಘಟ್ಟ, ಮಾರ‌್ನಮಿಬೈಲು, ಮಂಡ್ಲಿ ವೃತ್ತ, ಇಲಿಯಾಸ್‌ನಗರ 8ನೇ ಅಡ್ಡರಸ್ತೆಯಿಂದ 13ನೇ ಅಡ್ಡ ರಸ್ತೆಯವರೆಗೆ, ಆರ್.ಎಂ.ಎಲ್.ನಗರದ ಮೊದಲನೇ ಮತ್ತು ಎರಡನೇಯ ಹಂತ, ಮಂಜುನಾಥ ಬಡಾವಣೆ, ಟಿಪ್ಪುನಗರ ಎಡಭಾಗ, ಆನಂದರಾವ್ ಬಡಾವಣೆ, ಮಿಳ್ಳಘಟ್ಟ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನ.ಉ.ವಿ.-2ರ ಸಹಾಯಕ ಇಂಜಿನಿಯರ್ ತಿಳಿಸಿದ್ದಾರೆ.
ಗ್ರಾಮಾಂತರ ಭಾಗದಲ್ಲೂ ವಿದ್ಯುತ್ ವ್ಯತ್ಯಯ
ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಕುಂಸಿ ವಿ.ವಿ.ಕೇಂದ್ರ ವ್ಯಾಪ್ತಿಯಲ್ಲಿ ನಿರಂತರ ಜ್ಯೋತಿ ಕಾಮಗಾರಿಯ ಪ್ರಗತಿಯಲ್ಲಿರುವುದರಿಂದ ಎಫ್-2, 3 ಮತ್ತು 9 ಮಾರ್ಗಗಳಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ಜ.30 ಮತ್ತು ಜ.31ರಂದು ಎರಡು ದಿನಗಳು ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕುಂಸಿ, ಹುಬ್ಬನಹಳ್ಳಿ, ಹಾರ‌್ನಳ್ಳಿ, ಜಾಮೇನಹಳ್ಳೀ, ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪಾನಿ ಕುಂಸಿ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿದ್ಯುತ್) ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post