ಕಲ್ಪ ಮೀಡಿಯಾ ಹೌಸ್ | ಸೊರಬ |
ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಲ್ಲಿ ಸೆ.25 ರ ಭಾನುವಾರ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಸೊರಬ ಪಟ್ಟಣ ವ್ಯಾಪ್ತಿಯಲ್ಲಿ ಲಿಂಕ್ ಲೈನ್ ಕಾಮಗಾರಿ ನಿರ್ವಹಣಾ ಹಿನ್ನೆಲೆಯಲ್ಲಿ ಸೊರಬ 110/11 ಕೆ.ವಿ ಎಂ.ಯು.ಎಸ್.ಎಸ್ ನಿಂದ ವಿದ್ಯುತ್ ಸರಬರಾಜಾಗುವ ಗುಡವಿ, ಸೊರಬ ಪಟ್ಟಣ, ಕುಮ್ಮೂರು, ದೇವತಿಕೊಪ್ಪ, ಮಂಚಿ, ಬಿಳಾಗಿ, ಕಲ್ಲಂಬಿ, ಯಲವಳ್ಳಿ, ಕಡಸೂರು ಮಾರ್ಗಗಳಲ್ಲಿ ಬೆಳಿಗ್ಗೆ 10.30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಸಾರ್ವಜನಿಕರು ಎಂದಿನಂತೆ ಸಹಕರಿಸಲು ಮೆಸ್ಕಾಂ ಎಇಇ ಸತ್ಯಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post