ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಮಾರ್ಗಗಳಲ್ಲಿ ಮಾರ್ಚ್ 14 ಮತ್ತು 15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ನಗರದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಕುವೆಂಪುನಗರದ ಸೂಡಾ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಫಾ ಸಿಟಿ, ಮ್ಯಾಕ್ಸ್ ಲೇಔಟ್, ಎಂ.ಇ.ಎಸ್ ಲೇಔಟ್, ಚನ್ನಮುಂಬಾಪುರ, ಬಸವನ ಗಂಗೂರು, ರೆಡ್ಡಿ ಲೇಔಟ್,ಸವಳಂಗ ರಸ್ತೆ ರತ್ನಗಿರಿ ನಗರ ಮತ್ತು ಹುಣಸೋಡು,ಕಲ್ಲಗಂಗೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್’ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ವಿದ್ಯುತ್ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮೆಸ್ಕಾಂ ಕೋರಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















