ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಹೃದಯಭಾಗ, ಜನನಿಬಿಡ ಪ್ರದೇಶವಾದ ಇಂದಿರಾ ಗಾಂಧಿ ರಸ್ತೆಯಲ್ಲಿ ಏಕಮುಖ ಸಂಚಾರ ಮಾಡಲಾಗಿದೆ.
ಈ ಕುರಿತಂಎತ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದು, ಸಾರ್ವಜನಿಕರ ಮತ್ತು ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಎಲ್ಲಿಂದ ಎಲ್ಲಿಯವರೆಗೂ ಒನ್ ವೇ?
ಇಂದಿರಾ ಗಾಂಧಿ ರಸ್ತೆಯಲ್ಲಿ ಬಾಲರಾಜ್ ಅರಸ್ ರಸ್ತೆ ಕಡೆಯಿಂದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಕಡೆಗೆ ಸಂಚರಿಸಲು (ಎಂಟ್ರಿ) ಅವಕಾಶವನ್ನು ನೀಡಲಾಗಿದೆ.
ಇಂದಿರಾ ಗಾಂಧಿ ರಸ್ತೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠದ ಕಡೆಯಿಂದ ಬಾಲರಾಜ್ ಅರಸ್ ರಸ್ತೆ ಕಡೆಗೆ ಸಂಚಾರ ನಿಷೇಧಿಸಿ (ನೋ ಎಂಟ್ರಿ) ಏಕಮುಖ ಸಂಚಾರ ವ್ಯವಸ್ಥೆ ಮಾಡಲಾಗಿದೆ.
ಈ ರಸ್ತೆಯಲ್ಲಿ ನೋ ಪಾರ್ಕಿಂಗ್
ಇನ್ನು, ಕೆಜಿಐಡಿ ಕಚೇರಿ ಪ್ರಾರಂಭದಿಂದ ಬಾರ್ ಅಸೋಸಿಯೇಷನ್ ಕಟ್ಟಡದ ನಂತರದಲ್ಲಿರುವ ಗೇಟ್ವರೆಗೆ ಇರುವ ರಸ್ತೆಯಲ್ಲಿ ಎರಡು ಬದಿ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದಾರೆ.
ಇದರಿಂದಾಗಿ ನ್ಯಾಯಾಲಯದ ಹಿಂಬದಿಯಲ್ಲಿರುವ ಪಾರ್ಕಿಂಗ್ ಸ್ಥಳಕ್ಕೆ ಓಡಾಡಲು ತೀವ್ರ ಅಡಚಣೆಯಾಗುತ್ತಿದೆ. ರಸ್ತೆಯು ಕಿರಿದಾಗಿರುವುದರಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿರುವುದರಿಂದ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ಕೆ 1988 ಕಲಂ 115ರ ಅನ್ವಯ ಕೆಜಿಐಡಿ ಕಚೇರಿ ಪ್ರಾರಂಭದಿಂದ ಬಾರ್ ಅಸೋಸಿಯೇಷನ್ ಕಟ್ಟಡದ ನಂತರದಲ್ಲಿರುವ ಗೇಟ್’ವರೆಗೆ ಇರುವ ರಸ್ತೆಯಲ್ಲಿ ಎರಡು ಬದಿ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳನ್ನು ಪಾರ್ಕಿಂಗ್ ನಿಷೇಧಿಸಿ ಜಿಲ್ಲಾಧಿಕಾರಿಗಳು ಅದೇಶಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post