ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ತಾಲೂಕು ವ್ಯಾಪ್ತಿಯಲ್ಲಿ ಕೋವಿಡ್19 ಸೋಂಕು ಪ್ರಕರಣಗಳ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೇ 22 ಹಾಗೂ 23ರಂದು ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ತಹಶೀಲ್ದಾರ್ ಜಿ. ಸಂತೋಷ್ ಕುಮಾರ್ ಅವರು ಆದೇಶ ಹೊರಡಿಸಿದ್ದು, ನಿನ್ನೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಂಡಂತೆ ಎರಡು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ.
ಎರಡು ದಿನಗಳ ಕಾಲ ಹಾಲು ಮತ್ತು ಔಷಧ ಹೊರತುಪಡಿಸಿ, ಬೇರಾವುದೇ ಅಂಗಡಿ ಮುಂಗಟ್ಟುಗಳನ್ನು ತೆರೆಯುವಂತಿಲ್ಲ. ಅಲ್ಲದೇ, ಸಾರ್ವಜನಿಕವರು ಅನಾವಶ್ಯಕವಾಗಿ ಮನೆಗಳಿಂದ ಹೊರಕ್ಕೆ ಬಾರದೇ ಸಹಕಾರ ನೀಡಬೇಕು ಎಂದು ಕೋರಲಾಗಿದೆ.
ಎರಡೂ ದಿನಗಳ ಕಾಲ ದಿನಸಿ, ತರಕಾರಿ, ಹಣ್ಣು, ಸೊಪ್ಪು ಸೇರಿದಂತೆ ಯಾವುದೇ ರೀತಿಯ ವ್ಯಾಪಾರ ವ್ಯವಹಾರಗಳು ಇರುವುದಿಲ್ಲ. ಹೀಗಾಗಿ, ಶುಕ್ರವಾರವೇ ಅಗತ್ಯ ವಸ್ತುಗಳನ್ನು ಖರೀದಿ ಮಾಡಿಕೊಳ್ಳಬಹುದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post