Read - < 1 minute
ಭದ್ರಾವತಿ: ಎಂಪಿಎಂ ಕಾರ್ಖಾನೆಯ ವಸತಿ ಪ್ರದೇಶದಲ್ಲಿ ನಿರ್ಮಿಸಿರುವ ಅಂಗಡಿ ಮುಂಗಟ್ಟುಗಳನ್ನು ತೆರವುಗೊಳಿಸುವಂತೆ ನಗರಾಡಳಿತ ಇಲಾಖೆ ನಗರಸಭೆಗೆ ಪತ್ರ ಬರೆದಿದೆ.
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಎಂಪಿಎಂ ಕಾರ್ಖಾನೆಯ ವಸತಿ ಪ್ರದೇಶದಲ್ಲಿ ನಿರ್ಮಿಸಿರುವ ಅಂಗಡಿ ಮುಂಗಟ್ಟುಗಳನ್ನು ತೆರವುಗೊಳಿಸುವಂತೆ ನಗರಾಡಳಿತ ಇಲಾಖೆ ನಗರಸಭೆಗೆ ಪತ್ರ ಬರೆದಿದೆ.
ಈ ಕುರಿತಂತೆ ನಗರಸಭೆ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಇತ್ತೀಚೆಗೆ ಕೈಗಾರಿಕಾ ಸಚಿವರ ಭೇಟಿಯ ವೇಳೆ ನಡೆದ ಸಭೆಯಲ್ಲಿ ಎಂಪಿಎಂ ಕಾರ್ಖಾನೆಯ ನಿರ್ವಹಣೆಯನ್ನು ಹೊರಗುತ್ತಿಗೆ ನೀಡಲು ನಿರ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಕಾಗದ ಕಾರ್ಖಾನೆಯ ಒಡೆತನದಲ್ಲಿರುವ ಭೂಜಾಗದಲ್ಲಿನ ಅಂಗಡಿ ಮುಂಗಟ್ಟುಗಳನ್ನು ಪೂರ್ಣವಾಗಿ ತೆರವುಗೊಳಿಸಬೇಕಿರುತ್ತದೆ. ಹೀಗಾಗಿ, ಈ ಪ್ರದೇಶದಲ್ಲಿ ನಿರ್ಮಿಸಿ, ಬಾಡಿಗೆಗೆ ನೀಡಿರುವ ಬಹುಮಳಿಗೆಗಳನ್ನು ಕೂಡಲೇ ತೆರವುಗೊಳಿಸಿ, ಎಂಪಿಎಂ ವಶಕ್ಕೆ ನೀಡಿ ಎಂದು ಪತ್ರದಲ್ಲಿ ಸೂಚಿಸಲಾಗಿದೆ.
Get In Touch With Us info@kalpa.news Whatsapp: 9481252093
Discussion about this post