ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಮುದಾಯವನ್ನೊಳಗೊಂಡ ಕ್ರಿಕೆಟ್ ಪ್ರೇರಿತ ಕ್ರೀಡಾ ಚಟುವಟಿಕೆ ಉತ್ತೇಜಿಸುವ ನಿಟ್ಟಿನಲ್ಲಿ ತೊಡಗಿಕೊಂಡಿರುವ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ (ಕೆಎಸ್’ಪಿಎಲ್) ರಾಜ್ಯದಲ್ಲಿ ಇದೀಗ ಎರಡನೇ ಆವೃತ್ತಿಯ ಕ್ರೀಡಾಕೂಟಕ್ಕೆ ಸಜ್ಜಾಗಿದ್ದು, ನವೆಂಬರ್ 1 ರಿಂದ 29 ರ ವರೆಗೆ ಇಡೀ ತಿಂಗಳು ಕ್ರೀಡೆಯಲ್ಲಿ ಕನ್ನಡದ ಕಂಪನ್ನು ಪಸರಿಸಲು ಸಿದ್ಧತೆಗಳು ನಡೆಯುತ್ತಿವೆ.
ನಗರದ ಎಪಿಎಸ್ ಕ್ರೀಡಾಂಗಣದಲ್ಲಿ ಪಂದ್ಯಗಳು ಆಯೋಜನೆಗೊಂಡಿದ್ದು, ಸ್ಥಳೀಯ ಕ್ರೀಡಾಪ್ರತಿಭೆಗಳಿಗೆ ಈ ಕ್ರೀಡಾಕೂಟ ಉಜ್ವಲ ಅವಕಾಶ ಕಲ್ಪಿಸುತ್ತಿದ್ದು, ಐಕಾನ್ ಆಟಗಾರನ್ನು ಅಕ್ಟೋಬರ್’ನಲ್ಲಿ ಹರಾಜು ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.

ಕೆಎಸ್’ಪಿಎಲ್’ನಲ್ಲಿ ಈ ಬಾರಿ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟು 32 ಹಣಾಹಣಿಗೆ ಸಜ್ಜಾಗಿದ್ದು, ಪ್ರತಿಯೊಂದು ತಂಡಕ್ಕೂ ಕರ್ನಾಟಕ ಆಳಿದ ರಾಜಮನೆತನದ ಹೆಸರುಗಳನ್ನು ಇಡಲಾಗಿದೆ. ಕದಂಬರ ಗುಂಪು, ಚಾಲುಕ್ಯರ ಗುಂಪು, ಗಂಗರ ಗುಂಪು, ರಾಷ್ಟ್ರಕೂಟರ ಗುಂಪು, ಹೊಯ್ಸಳರ ಗುಂಪು, ವಿಜಯನಗರ ಸಾಮ್ರಾಜ್ಯದ ಗುಂಪು, ಮೈಸೂರು ಅರಸ ಗುಂಪು ಎಂದು ತಂಡಗಳನ್ನು ಹೆಸರಿಸಲಾಗಿದೆ.
ನಟ ಶಶಿಕುಮಾರ್ ಮಾತನಾಡಿ, ಯುವ ಜನಾಂಗಕ್ಕೆ ಕ್ರಿಕೆಟ್ ಬಗ್ಗೆ ಹೆಚ್ಚಿನ ಒಲವಿದ್ದು, ಗಲ್ಲಿ ಗಲ್ಲಿಗಳಲ್ಲಿ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುತ್ತಿರುವುದು ವಿಶೇಷ ಎಂದರು.
ಕೆಎಸ್’ಪಿಎಲ್ ಪ್ರಧಾನ ಕಾರ್ಯದರ್ಶಿ ರಘು ಮಾತನಾಡಿ, ಒಟ್ಟು 32 ತಂಡಗಳಿಗೆ 32 ಮಂದಿ ಸೆಲೆಬ್ರೆಟಿ ರಾಯಭಾರಿಗಳನ್ನು ನೇಮಿಸಿದ್ದು, ಕ್ರಿಕೆಟ್ ಅಭಿಮಾನಿಗಳು, ಉದ್ಯಮಿಗಳು, ಕ್ರೀಡಾಪ್ರೇಮಿಗಳ ತಂಡ ಕ್ರಿಕೆಟ್ ಹಬ್ಬವನ್ನು ಮತ್ತಷ್ಟು ರೋಚಕಗೊಳಿಸಲಿದೆ. ಕೆಎಸ್’ಪಿಎಲ್ ಕೇವಲ ಕ್ರೀಡಾ ಸಂಭ್ರಮವಲ್ಲದೆ, ಪ್ರತಿಭೆ, ಮನರಂಜನೆ ಮತ್ತು ಸಮುದಾಯದ ಒಗ್ಗಟ್ಟನ್ನು ಉತ್ತೇಜಿಸುವ ವೇದಿಕೆಯಾಗಲಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post