ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಈ ಹಿಂದೆ ಇಳಿಕೆ ಮಾಡಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಸಾಂದರ್ಭಿಕ ರಜೆಯನ್ನು ಮತ್ತೆ 15ಕ್ಕೆ ಏರಿಕೆ ಮಾಡಲಾಗಿದೆ.
ಈ ಕುರಿತಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಮೊಹಮದ್ ನಯೀಮ್ ಮೊಮಿನ್ ಆದೇಶ ಹೊರಡಿಸಿದ್ದು, ಶಿಕ್ಷಣ ಹಾಗೂ ಆರೋಗ್ಯ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಎರಡನೆಯ ಮತ್ತು ನಾಲ್ಕನೆಯ ಶನಿವಾರದ ರಜೆ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಆದ್ದರಿಂದ ಈ ವೃಂದದ ನೌಕರರಿಗೆ ಈ ಹಿಂದಿನಂತೆ ಪ್ರತಿ ಕ್ಯಾಲೆಂಡರ್ ವರ್ಷಕ್ಕೆ 15 ದಿನ ಸಾಂದರ್ಭಿಕ ರಜೆ ಮಂಜೂರು ಮಾಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದಿದ್ದಾರೆ.
ಈ ಆದೇಶ 2020ನೆಯ ಕ್ಯಾಲೆಂಡರ್ ವರ್ಷದಿಂದಲೇ ಜಾರಿಗೆ ಬರುವಂತೆ ಸೂಚಿಸಲಾಗಿದೆ.
Get in Touch With Us info@kalpa.news Whatsapp: 9481252093
Discussion about this post