ಭುವನೇಶ್ವರ್: ಒಡಿಶಾ ಕರಾವಳಿ ತೀರದತ್ತ ಧಾವಿಸುತ್ತಿರುವ ಫನಿ ಚಡಮಾರುತ ಭೀಕರ ಸ್ವರೂಪ ಪಡೆಯುತ್ತಿದ್ದು, ಈಗಾಗಲೇ ಒಡಿಶಾ ಮತ್ತು ಆಂಧ್ರ ಪ್ರದೇಶ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಒಡಿಶಾದಲ್ಲಿ ಹೇರಲಾಗಿರುವ ನೀತಿ ಸಂಹಿತೆಯನ್ನು ಚುನಾವಣಾ ಆಯೋಗ ಹಿಂದಕ್ಕೆ ಪಡೆದಿದೆ.
ಚಂಡಮಾರುತದ ಹಿನ್ನೆಲೆಯಲ್ಲಿ ಒಡಿಶಾದಲ್ಲಿ ಸಾಕಷ್ಟು ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಯ ಅಗತ್ಯವಿರುವ ಹಿನ್ನೆಲೆಯಲ್ಲಿ ನೀತಿ ಸಂಹಿತೆಯನ್ನು ಹಿಂದಕ್ಕೆ ಪಡೆದಿದೆ.
ಒಡಿಶಾದ ಪುರಿ, ಜಗತ್ ಸಿಂಗ್ ಪುರ್, ಕೇಂದ್ರಪಾರ, ಭದ್ರಕ್, ಬಾಲಾಸೋರ್, ಮಯೂರ್ ಭಂಜ್, ಗಜಪತಿ, ಗಂಜಮ್, ಖೋದಾರ್, ಕಟಕ್ ಮತ್ತು ಜಾಜ್ಪುರ್’ನಲ್ಲಿ ರಕ್ಷಣಾ ಕಾರ್ಯಾಚರಣೆ ನಿಮಿತ್ತ ಒಡಿಶಾದಲ್ಲಿ ನೀತಿ ಸಂಹಿತೆಯನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.
ಹಲವು ರಾಜ್ಯಗಳಲ್ಲಿ ಹೈ ಅಲರ್ಟ್
ಫನಿ ಚಂಡಮಾರುತ ಧಾವಿಸುತ್ತಿರುವ ಹಿನ್ನೆಲೆಯಲ್ಲಿ ಒಡಿಶಾ ಕರಾವಳಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ಬಂಗಾಳ ಕೊಲ್ಲಿಯ ಈಶಾನ್ಯ ಭಾಗದಲ್ಲಿನ ಫನಿ ಚಂಡಮಾರುತವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರಸ್ತುತ ಗಂಟೆಗೆ 200 ಕಿಮೀ ವೇಗದಲ್ಲಿ ಬೀಸುತ್ತಿರುವ ಫನಿ ಒಡಿಶಾದತ್ತ ಧಾವಿಸುತ್ತಿದೆ ಎಂದು ವರದಿಯಾಗಿದೆ.
ಒಡಿಶಾದಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಬೌಧ್, ಕಲಾಹಂಡಿ, ಸಂಬಾಲ್ಪುರ, ಡಿಯೋಘಡ್ ಮತ್ತು ಸುಂದರ್ ಘಡ್’ನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
Discussion about this post