ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಕಮಲಾ ನೆಹರು ಮಹಿಳಾ ಕಾಲೇಜಿಗೆ ಹೊಂದಿಕೊಂಡಿರುವ ಮಹಾನಗರ ಪಾಲಿಕೆಯ #CityCorporation ಖಾಲಿ ನಿವೇಶನಕ್ಕೆ ಇಂದು ಮಧ್ಯಾಹ್ನ ಉಪಲೋಕಾಯುಕ್ತ ನ್ಯಾಯಮೂರ್ತಿ ಫಣೀಂದ್ರ ಭೇಟಿ ನೀಡಿ ಪರಿಶೀಲಿಸಿ, ಚಾಟಿ ಬೀಸಿದ ಕೆಲವೇ ಕ್ಷಣಗಳಲ್ಲಿ ಅಲ್ಲಿದ್ದ ಕೊಳಕನ್ನು ಪಾಲಿಕೆ ಸ್ವಚ್ಛಗೊಳಿಸಿರುವ ಘಟನೆ ನಡೆದಿದೆ.
ನಗರ ಹೃದಯದ ಭಾಗದಲ್ಲಿರುವ ಪಾಲಿಕೆ ನಿವೇಶನವು ತ್ಯಾಜ್ಯ, ಒಡೆದ ಬಾಟಲಿಗಳು, ಕಸ ಕಡ್ಡಿಗಳ ರಾಶಿಯಿಂದ ಶೋಚನೀಯ ಸ್ಥಿತಿಗೆ ತಲುಪಿದ್ದು, ಹೆಣ್ಣು ಮಕ್ಕಳ ಕಾಲೇಜಿಗೆ ಹೊಂದಿಕೆಯಾಗಿರುವುದರಿಂದ ವಿದ್ಯಾರ್ಥಿನಿಯರ ಸುರಕ್ಷತೆಯ ಬಗ್ಗೆಯೂ ಅಗಾಗೆ ದೂರುಗಳು ಸಲ್ಲಿಕೆಯಾಗಿದ್ದವು.
Also Read>> ಸೊರಬ | ಸುನಿತಾ ವಿಲಿಯಮ್ಸ್ ಭೂಮಿಗೆ ಮರಳಿದ ಹಿನ್ನೆಲೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ
ಇಂತಹ ಹಲವು ದೂರುಗಳ ಹಿನ್ನೆಲೆಯಲ್ಲಿ ಉಪಲೋಕಾಯುಕ್ತರು #DeputyLokayukta ಭೇಟಿ ನೀಡಿದರು. ಸ್ಥಳ ಪರಿಶೀಲನೆಯ ವೇಳೆ ಪ್ಲಾಸ್ಟಿಕ್ ಗಲೀಜುಗಳು, ಮದ್ಯಬಾಟಲಿಗಳ ರಾಶಿಗಳನ್ನು ಕಂಡು ಉಪಲೋಕಾಯುಕ್ತರು ಅಸಮಾಧಾನ ವ್ಯಕ್ತಪಡಿಸಿದರು.

Also Read>> ಸುನೀತಾ ವಿಲಿಯಮ್ಸ್ ಮರಳಿ ಭೂಮಿಗೆ ಹಿನ್ನೆಲೆ: ಸಿಹಿ ಹಂಚಿ ಸಂಭ್ರಮಾಚರಣೆ
ಈ ಬಗ್ಗೆ ಪ್ರತಿಕ್ರಿಯಿಸಿದ ಆಯುಕ್ತರು ಒಂದು ತಿಂಗಳ ಒಳಗಾಗಿ ಸಂಪೂರ್ಣ ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.

ಅಬ್ಬಾ ಈಗಲಾದರೂ ಎದ್ದ ಪಾಲಿಕೆ
ಉಪಲೋಕಾಯುಕ್ತರು ಭೇಟಿ ನೀಡಿದ ಕೆಲವೇ ನಿಮಿಷಗಳಲ್ಲಿ ಪಾಲಿಕೆಯ ಸಿಬ್ಬಂದಿಗಳು ಜಾಗದ ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದು ಸಾರ್ವಜನಿಕ ಚರ್ಚೆಗೆ ಗ್ರಾಸವಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post