ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಸುಮಾರು ನಾಲ್ಕು ವರ್ಷಗಳ ನಂತರ ತೈಲ ಕಂಪನಿಗಳು ದರವದಲ್ಲಿ ಪರಿಷ್ಕರಣೆ ಮಾಡಿದ್ದು, ಇದರಂತೆ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್’ಗೆ 3 ರೂ. ಏರಿಕೆಯಾಗಿದೆ.
ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಯುದ್ಧ #War ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದ್ದು, ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಲೀಟರ್’ಗೆ ರೂ.3ರಷ್ಟು ಹೆಚ್ಚಳ ಮಾಡಲಾಗಿದೆ.
Also Read>> Annual Disaster Management Mock Drill Conducted at Harihar Railway Station
ತೈಲ ಕಂಪನಿಗಳು ನಾಲ್ಕು ವರ್ಷದ ಹಿಂದೆ ದರವನ್ನು ಪರಿಷ್ಕರಣೆ ಮಾಡಿದ್ದವು. ಇದೀಗ ಯುದ್ಧದ ಹಾಗೂ ಜಾಗತಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದರವನ್ನು ಪರಿಷ್ಕರಣೆ ಮಾಡಿವೆ.
ಇದರಂತೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರವು ರೂ.94.77ರಿಂದ ರೂ.97.77ಕ್ಕೆ ಏರಿಕೆಯಾದರೆ, ಡೀಸೆಲ್ ದರವು ರೂ.89.67ರಿಂದ ರೂ.90.67ಕ್ಕೆ ಹೆಚ್ಚಳವಾಗಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಗಳು ಹೊಸ ದರ ಜಾರಿಗೆ ತಂದಿವೆ.
ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಸಂಘರ್ಷ ಜಾಗತಿಕ ಕಚ್ಚಾ ತೈಲ ಮಾರುಕಟ್ಟೆಯಲ್ಲಿ #CrudeOilMarket ಭಾರೀ ಅಸ್ಥಿರತೆ ಉಂಟು ಮಾಡಿದೆ.
ತೈಲ ಉತ್ಪಾದನೆ ಮತ್ತು ಸಾಗಣೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿಯಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ.
ಭಾರತ ಆಮದು ಮಾಡುವ ಕಚ್ಚಾ ತೈಲದ ಸರಾಸರಿ ಬೆಲೆ ಫೆಬ್ರವರಿಯಲ್ಲಿ ಬ್ಯಾರೆಲ್’ಗೆ ಸುಮಾರು 69 ಡಾಲರ್ ಇದ್ದರೆ, ಯುದ್ಧ ಆರಂಭವಾದ ಬಳಿಕ ಅದು 113-114 ಡಾಲರ್ ಮಟ್ಟಕ್ಕೇರಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದರೂ ಕಳೆದ 11 ವಾರಗಳಿಂದ ದೇಶೀಯ ಇಂಧನ ದರವನ್ನು ತೈಲ ಕಂಪನಿಗಳು ಸ್ಥಿರವಾಗಿಯೇ ಉಳಿಸಿಕೊಂಡಿದ್ದವು. ಆದರೆ, ನಿರಂತರ ನಷ್ಟ ಮತ್ತು ಹೆಚ್ಚುತ್ತಿರುವ ಕಾರ್ಯಾಚರಣಾ ವೆಚ್ಚದಿಂದ ಇದೀಗ ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು


















