ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದೇಶೀಯ ಎಲೆಕ್ಟ್ರಿಕ್ ವಾಹನ ತಯಾರಕ ಸಂಸ್ಥೆ ಒಲೆಕ್ಟ್ರಾ ಗ್ರೀನ್‌ಟೆಕ್ ತನ್ನ ತ್ರೈಮಾಸಿಕ ವರದಿ ಬಿಡುಗಡೆಗೊಳಿಸಿದ್ದು, ಕಳೆದ ವರ್ಷದ ತ್ರೈಮಾಸಿಕಕ್ಕೆ ಹೋಲಿಕೆ ಮಾಡಿದರೆ ಪ್ರಸಕ್ತ ವರ್ಷಕ್ಕೆ ಶೇ.4 ರಷ್ಟು ಹೆಚ್ಚಳ ಲಾಭಾಂಶ ಕಂಡಿದ್ದು, 49.43 ಕೋಟಿ ರೂ. ಗಳಿಸಿದೆ ಎಂದು ಹೇಳಿದೆ.
ಕಳೆದ ಹಣಕಾಸು ವರ್ಷದ ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಕಂಪನಿಯು ತೆರಿಗೆ ನಂತರದ ಲಾಭವನ್ನು 47.65 ಕೋಟಿ ರೂ.ಗಳಿಗೆ ತಲುಪಿದೆ.
ಈ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಆದಾಯವು ರೂ.657 ಕೋಟಿಗೆ ಏರಿಕೆಯಾಗಿದ್ದು, ಹಿಂದಿನ ವರ್ಷದ ಇದೇ ಅವಧಿಯಲ್ಲಿ ಇದು ರೂ.524 ಕೋಟಿಗಳಷ್ಟಿತ್ತು ಎಂದು ಒಲೆಕ್ಟ್ರಾ ಗ್ರೀನ್‌ಟೆಕ್ ಹೇಳಿಕೆಯಲ್ಲಿ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post