ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೈಂಗಿಕ ಕಿರುಕುಳ ಆರೋಪದಲ್ಲಿ ಬಂಧಿತವಾಗಿ ಜೈಲು ಪಾಲಾಗಿರುವ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಜಾಮೀನು ಅರ್ಜಿ ಮತ್ತೆ ತಿರಸ್ಕೃತಗೊಂಡಿದೆ.
ಇನ್ನೊಂದೆಡೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ವಾಮೀಜಿಗೆ ಆಂಜಿಯೋಗ್ರಾಂ ಯಶಸ್ವಿಯಾಗಿದ್ದು, ಇಂದು ಅವರನ್ನು ಚಿತ್ರದುರ್ಗಕ್ಕೆ ಶಿಫ್ಟ್ ಮಾಡಲಾಗಿದೆ.
ಚಿತ್ರದುರ್ಗ ನ್ಯಾಯಾಲಯದ ಆದೇಶದಂತೆ ಕಳೆದ ಎರಡು ದಿನಗಳಿಂದ ಮುರುಘಾಶ್ರೀಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಲಾಯಿತು. ಆಂಜಿಯೋಗ್ರಾಂ ಹಾಗೂ ಎಕೋ ಪರೀಕ್ಷೆ ನಡೆಸಲಾಗಿದ್ದು, ಇದರ ನಂತರ ಚಿತ್ರದುರ್ಗಕ್ಕೆ ಮರಳಿ ಕರೆದೊಯ್ಯಲಾಗಿದೆ.
ಇನ್ನು, ಚಿತ್ರದುರ್ಗ 2ನೆಯ ಸೆಷನ್ಸ್ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದು, ಸೆ.27ರವರೆಗೂ ಜೈಲವಾಸವೇ ಗತಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post