ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕುವೆಂಪು ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಬಿ. ತಿಪ್ಪೇಸ್ವಾಮಿ ಅವರು ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹ (ವಿಜಿಎಸ್’ಟಿ) ನೀಡುವ ಪ್ರತಿಷ್ಠಿತ ಶ್ರೇಷ್ಠ ಸಂಶೋಧನಾ ಪ್ರಕಟಣಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.
Also Read: ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಶಕ್ತಿ ಮೀರಿ ಪ್ರಯತ್ನ: ಬಿ.ಎಸ್. ಯಡಿಯೂರಪ್ಪ
ಬೆಂಗಳೂರಿನ ಜವಾಹರ್ಲಾಲ್ ನೆಹರು ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್ ಪ್ರಶಸ್ತಿ ಪ್ರದಾನ ಮಾಡಿದರು. ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯದಲ್ಲಿ ಜಾಗತಿಕ ಮಟ್ಟದ ಸಂಶೋಧನಾ ಲೇಖನಗಳನ್ನು ಪ್ರಕಟಿಸಿರುವುದನ್ನು ಗುರುತಿಸಿ ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.


ಮೂಲತಃ ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿಯ ರಾಮಸಾಗರ ಗ್ರಾಮದ ಗುಂಡ ಬಸಯ್ಯ ಮತ್ತು ಪಾಪಮ್ಮ ಅವರ ಪುತ್ರರಾದ ಪ್ರೊ. ಬಿ. ತಿಪ್ಪೇಸ್ವಾಮಿ ಈ ಹಿಂದೆ ಯುಜಿಸಿ ನೀಡುವ ಸರ್ ಸಿ.ವಿ. ರಾಮನ್ ಪೋಸ್ಟ್ ಡಾಕ್ಟರಲ್ ಫೆಲೋಷಿಪ್ ಪಡೆದು ಅಮೆರಿಕಾದ ನಾರ್ಥ್ ಕೆರೊಲಿನಾ ಸ್ಟೇಟ್ ವಿಶ್ವವಿದ್ಯಾಲಯದಲ್ಲಿ ಉನ್ನತ ಸಂಶೋಧನೆ ಕೈಗೊಂಡಿದ್ದಾರೆ. ಕಳೆದ 16 ವರ್ಷಗಳಿಂದ ಸ್ನಾತಕೋತ್ತರ ಸೂಕ್ಷ್ಮ ಜೀವಶಾಸ್ತ್ರ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ತಿಪ್ಪೇಸ್ವಾಮಿ ಅವರ ಸಾಧನೆ ಇತರ ಅಧ್ಯಾಪಕರಿಗೆ ಮಾದರಿಯಾಗಲಿ ಎಂದು ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ ಮತ್ತು ಕುಲಸಚಿವೆ ಜಿ. ಅನುರಾಧ ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post