ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ದಕ್ಷಿಣ ಕನ್ನಡ: ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಜಿಲ್ಲೆಯಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಬುಧವಾರ ರಾತ್ರಿಯಿಂದ ಒಂದು ವಾರಗಳ ಲಾಕ್ ಡೌನ್ ಮಾಡಲಾಗುವುದು. ಲಾಕ್ ಡೌನ್ ಮಾರ್ಗಸೂಚಿಗಳನ್ನು ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಯವರು ಬಿಡುಗಡೆ ಮಾಡಲಿದ್ದಾರೆ ಎಂದರು.
ಇಂದು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವೀಡಿಯೋ ಕಾನ್ಫರೆನ್ಸ್ ನಡೆಸಿದ್ದು, ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ, ಮಂಗಳೂರು ಸಂಸದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಜಿಲ್ಲಾಡಳಿತ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದರು. ಜನಪ್ರತಿನಿಧಿಗಳ ಜೊತೆಗೆ ನಿರ್ಧಾರ ಮಾಡುವಂತೆ ಸಿಎಂ ಸೂಚಿಸಿದ್ದರು ಎನ್ನಲಾಗಿದೆ.
ಭಾನುವಾರ ಒಂದೇ ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 196 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2222ಕ್ಕೆ ಏರಿಕೆಯಾಗಿದೆ. ಇಲ್ಲಿ ನಿನ್ನೆ ಒಂದೇ ದಿನ ಐವರು ಸಾವಿಗೀಡಾಗಿದ್ದಾರೆ.
Get In Touch With Us info@kalpa.news Whatsapp: 9481252093















