ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹಳೇ ಸೀಗೇಬಾಗಿ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಳೇನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಮಾಲು ಸಹಿತ ಬಂಧಿಸಲಾಗಿದೆ.
ಇಂದು ಮಧ್ಯಾಹ್ನ ಹಳೇ ಸೀಗೆಬಾಗಿಯ ಲೇಔಟ್ ಒಂದರಲ್ಲಿ ಇಬ್ಬರು ವ್ಯಕ್ತಿಗಳು ದ್ವಿಚಕ್ರ ವಾಹನ ನಿಲ್ಲಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳಿಂದ ಅಂದಾಜು ಮೌಲ್ಯ 1,36,000 ರೂ.ಗಳ ಒಟ್ಟು 3 ಕೆಜಿ 555 ಗ್ರಾಂ ತೂಕದ ಒಣ ಗಾಂಜಾ ಹಾಗೂ 1,000 ರೂ. ನಗದು ಹಣ ಮತ್ತು ಕೃತ್ಯಕ್ಕೆ ಉಪಯೋಗಿಸಿದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ.
ಭದ್ರಾವತಿ ನಗರ ವೃತ್ತ ಸಿಪಿಐ ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















