ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಈಗಾಗಲೇ ಭಾರೀ ಮಳೆಯಿಂದಾಗಿ ತತ್ತರಿಸಿ ಹೋಗಿರುವ ಶಿವಮೊಗ್ಗ #Shivamogga ಜಿಲ್ಲೆಗೆ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಈ ಕುರಿತಂತೆ ಹವಾಮಾನ ಇಲಾಖೆ #IMDKarnataka ವರದಿ ಪ್ರಕಟಿಸಿದ್ದು, ಅ.21ರ ಎಂದು ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ #OrangeAlert ಘೋಷಿಸಲಾಗಿದೆ. ಅ.22ರ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು, ಚಿಕ್ಕಮಗಳೂರು ಜಿಲ್ಲೆಯಲ್ಲೂ ಸಹ ಇಂದು ಆರೆಂಜ್ ಹಾಗೂ ನಾಳೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
Also read: ಆಡಳಿತ ಪಕ್ಷದ ಹಗರಣಗಳನ್ನು ಬೀದಿಗೆ ತರದಂತೆ ಗದಾಪ್ರಹಾರ: ಸಂಸದ ರಾಘವೇಂದ್ರ ಆರೋಪ

ಅಂಗನವಾಡಿ, ಎಲ್ಕೆಜಿ, ಯುಕೆಜಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ ಶಾಲೆ, ಅನುದಾನ ರಹಿತ ಶಾಲೆ ಸೇರಿ ನಗರದ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post