ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮೋದಿ ಸರ್ಕಾರ ಜಾರಿಗೆ ತರುತ್ತಿರುವ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಮಾತ್ರವಲ್ಲ, ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವುದೇ ನಮ್ಮ ಗುರಿ ಎಂದು ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಗುಡುಗಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಸಿಎಎ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತದೆ. ಈ ಹೋರಾಟದಲ್ಲಿ ನಾನು ಜೈಲಿಗೆ ಹೋಗಲೂ ಸಹ ಸಿದ್ಧ. ಜಿಲ್ಲೆಯಾದ್ಯಂತ ಕಾಯ್ದೆ ವಿರುದ್ಧ ಹೋರಾಟ ನಡೆಸಿ, ಜನರಿಗೆ ತಿಳಿಸುತ್ತೇವೆ ಎಂದರು.
ಕೋಮು ಸೌಹಾರ್ಧತೆ ಕದಡಿ, ಕಾಂಗ್ರೆಸ್ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂಬ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಎಲ್ಲರಿಗಿಂತ ದೊಡ್ಡ ದೇಶದ್ರೋಹಿ ಶಂಕರಮೂರ್ತಿ. ಅವರಿಗೆ ದೇಶದ ಸ್ವಾತಂತ್ರಕ್ಕೆ ಹೋರಾಟ ಮಾಡಿದ ಪರಿಶ್ರಮ ಗೊತ್ತಿಲ್ಲ. ಅಧಿಕಾರ ಅನುಭವಿಸಿ, ಈಗ ಅಧಿಕಾರ ಉಳಿಸಿಕೊಳ್ಳಲು ಹೀಗೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
Get in Touch With Us info@kalpa.news Whatsapp: 9481252093

















