ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಂಗಳೂರು: ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಿಕೊಡುವಂತಹ ಸಮರ್ಪಕ ಕೆಲಸವನ್ನು ಸರ್ಕಾರ ಮಾಡುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳುವಂತೆ ಸರ್ಕಾರಕ್ಕೆ ಅಷ್ಟೊಂದು ಬಡತನವೇನೂ ಬಂದಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿರುಗೇಟು ನೀಡಿದ್ದಾರೆ.
ಕಾರ್ಮಿಕರನ್ನು ಊರಿಗೆ ಕಳುಹಿಸಲು ಸರ್ಕಾರದ ಬಳಿ ಹಣವಿಲ್ಲ ಎಂಬ ಡಿ.ಕೆ. ಶಿವಕುಮಾರ್ ಆರೋಪಕ್ಕೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ಸರ್ಕಾರ ಸದೃಢವಾಗಿದೆ. ಗುರುವಾರದವರೆಗೆ ಸರ್ಕಾರವೆ ಎಲ್ಲಾ ಕಾರ್ಮಿಕರನ್ನು ಅವರವರ ಊರುಗಳಿಗೆ ಉಚಿತವಾಗಿ ಪ್ರಯಾಣಿಸಲು ಬಸ್ಸುಗಳನ್ನು ಪೂರೈಸಿ ವ್ಯವಸ್ಥೆ ಮಾಡಿದೆ. ಡಿ.ಕೆ. ಶಿವಕುಮಾರ್‌ಗೆ ಈಗ ಮಾಡಲು ಕೆಲಸವಿಲ್ಲ. ಕೋವಿಡ್-19ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಡಿ.ಕೆ. ಶಿವಕುಮಾರ್ ರಾಜಕಾರಣ ಮಾಡುತ್ತಿದ್ದಾರೆ. ಎಂದಮೇಲೆ ಅವರ ಚಿಂತನೆಯೆಷ್ಟು ಎನ್ನುವುದನ್ನು ಜನರೇ ತಿಳಿಯಬೇಕು ಎಂದು ಸೂಚ್ಯವಾಗಿ ಉತ್ತರಿಸಿದರು.
(ವರದಿ: ಕೃಷಿ ಸಚಿವರ ಮಾಧ್ಯಮ ಕಾರ್ಯದರ್ಶಿ)
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
Discussion about this post