ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ನಗರ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ನಗರಸಭೆ ಕಾರ್ಯಾಚರಣೆ ಆರಂಭಿಸಿದೆ.
ಕೋಟೆ ಭಾಗದಲ್ಲಿ ಇತ್ತೀಚೆಗೆ ಬಾಲಕಿಯೊಬ್ಬಳಿಗೆ ನಾಯಿಯೊಂದು ಕಚ್ಚಿತ್ತು. ಅಲ್ಲದೇ, ನಗರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ಸಾರ್ವಜನಿಕರಿಂದ ನಗರಸಭೆ ಹಲವಾರು ದೂರುಗಳ ಬಂದಿದ್ದವು. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿದ್ದು, ಇಂದಿನಿಂದ ನಾಯಿ ಹಿಡಿಯುವ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ.
ಈ ಕುರಿತಂತೆ ಮಾತನಾಡಿದ ನಗರಸಭೆ ಆಯುಕ್ತ ಮನೋಹರ್, ಬೀದಿ ನಾಯಿಗಳ ಹಾವಳಿಯಿಂದ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ 35 ವಾರ್ಡ್‌ಗಳಲ್ಲಿ ಇಂದಿನಿಂದ ನಾಯಿ ಹಿಡಿಯುವ ಕಾರ್ಯವನ್ನು ಆರಂಭಿಸಲಾಗಿದ್ದು, ಅಂದಾಜು ಒಂದು ತಿಂಗಳ ಕಾಲ ಕಾರ್ಯಾಚರಣೆ ನಡೆಯಲಿದೆ ಎಂದರು.
ಈ ಕಾರ್ಯಾಚರಣೆಯಲ್ಲಿ ನಾಯಿ ಹಿಡಿಯುವ ತಂಡವನ್ನು ಮೈಸೂರಿನಿಂದ ಕರೆಸಲಾಗಿದೆ. ಹಿಡಿದ ನಾಯಿಗಳಿಗೆ ಪಶುವೈದ್ಯರು ಹಾಗೂ ಸಿಬ್ಬಂದಿಗಳು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿ, ಆ್ಯಂಟಿ ರೇಬಿಸ್ ಇಂಜೆಕ್ಷನ್ ಮಾಡಿ, ಆನಂತರ ಹೊರಕ್ಕೆ ಬಿಡಲಾಗುತ್ತದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post