ಕಲ್ಪ ಮೀಡಿಯಾ ಹೌಸ್ | ಸೊರಬ |
ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನ ಹತ್ಯೆ ಮಾಡಿದ ಜಿಹಾದಿ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
Also Read: ಹರ್ಷ ಹತ್ಯೆ ಪ್ರಕರಣ: ಆರೋಪಿಗಳಾದ ಖಾಸಿಫ್, ಸೈಯ್ಯದ್ ಬಂಧನ, ಉಳಿದವರ ಪತ್ತೆಗೆ ಕಾರ್ಯಾಚರಣೆ
ವಿಶ್ವ ಹಿಂದು ಪರಿಷತ್ ತಾಲೂಕು ಅಧ್ಯಕ್ಷ ಎಂ.ಎಸ್. ಕಾಳಿಂಗರಾಜ್ ಮಾತನಾಡಿ, ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಎಸ್’ಡಿಪಿಐ, ಪಿಎಫ್’ಐ ಮತ್ತು ಸಿಎಫ್’ಐ ಗೂಂಡಾಗಳು ಹಲ್ಲೆ, ಕೊಲೆ ಮುಂತಾದ ಕಾನೂನು ಬಾಹೀರ ಚಟುವಟಿಕೆಗಳನ್ನು ಮಾಡುತ್ತಾ ಬಂದಿರುತ್ತಾರೆ. ಇದರ ಮುಂದುವರೆದ ಭಾಗವಾಗಿ ಭಾನುವಾರು ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನನ್ನು ಅಮಾನುಷವಾಗಿ ಹತ್ಯೆ ಮಾಡಿರುವುದನ್ನು ಸಂಘಟನೆ ಖಂಡಿಸುತ್ತದೆ ಎಂದು ಕಿಡಿ ಕಾರಿದರು.

Also Read: ಶಿವಮೊಗ್ಗದಲ್ಲಿ ಇಂದು ರಾತ್ರಿಯಿಂದ ಬುಧವಾರ ಮುಂಜಾನೆವರೆಗೂ ಕರ್ಫ್ಯೂ ಜಾರಿ
ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ ಮಾತನಾಡಿ, ಸಮಾಜಘಾತುಕ ಶಕ್ತಿಗಳನ್ನು ಮಟ್ಟಹಾಕಬೇಕಾದ ತುರ್ತು ಅಗತ್ಯವಿದೆ. ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆಯಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ತಕ್ಷಣವೇ ಅವರನ್ನು ಬಂಧಿಸಬೇಕು. ಕೃತ್ಯಕ್ಕೆ ಸಹಕಾರ ನೀಡಿದವರನ್ನು ಜೊತೆಗೆ ಸಮರ್ಥನೆ ಮಾಡಿಕೊಳ್ಳುತ್ತಿರುವವರನ್ನು ಬಂಧಿಸಬೇಕು. ಕೃತ್ಯದಲ್ಲಿ ತೊಡಗಿದವರಿಗೆ ಅತ್ಯುಗ್ರವಾದ ಗಲ್ಲು ಶಿಕ್ಷೆಯನ್ನು ವಿಧಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

Also Read: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ನಾಳೆಯೂ ಶಾಲಾ-ಕಾಲೇಜಿಗೆ ರಜೆ ಘೋಷಣೆ
ವಿಶ್ವ ಹಿಂದು ಪರಿಷತ್, ಬಜರಂಗದಳ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳಿಂದ ಪಟ್ಟಣದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ನಂತರ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post