ಕಲ್ಪ ಮೀಡಿಯಾ ಹೌಸ್
ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದ 470ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ರೊಮೇನಿಯಾ ತಲುಪಿದ್ದು, ಅವರನ್ನು ಸುರಕ್ಷಿತವಾಗಿ ಕರೆತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ತಿಳಿಸಿದೆ.
ಯುದ್ಧ ಪೀಡಿತ ಉಕ್ರೇನ್ನಲ್ಲಿ ಸಾವಿರಾರೂ ಸಂಖ್ಯೆಯಲ್ಲಿ ಭಾರತೀಯ ವಿದ್ಯಾರ್ಥಿಗಳು ಸಿಲುಕಿದ್ದಾರೆ. ಈ ನಡುವೆ 470ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಕ್ರೇನ್ ನಿಂದ ಪೊರಬ್ನೆ-ಸಿರೆಟ್ ಬಾರ್ಡರ್ ಮೂಲಕ ರೊಮೇನಿಯಾ ಪ್ರವೇಶಿಸಿದ್ದಾರೆ. ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡುವ ಸಲುವಾಗಿ ಉಕ್ರೇನ್ ನ ನೆರೆಯ ದೇಶಗಳಿಗೆ ಸ್ಥಳಾಂತರಿಸುತ್ತಿದ್ದೇವೆ. ಅಲ್ಲಿಂದ ಭಾರತಕ್ಕೆ ಕರೆತರುವ ಕೆಲಸ ಮಾಡಲಾಗುತ್ತದೆ ಎಂದು ರಾಯಭಾರಿ ಕಚೇರಿ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post