ಲಖ್ನೋ: ಉತ್ತರಪ್ರದೇಶಲ್ಲಿ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಪೇದೆಯೊಬ್ಬರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 90 ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದ್ದು, 19 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಎಫ್‌ಐಆರ್ ನಲ್ಲಿ 23 ಮಂದಿ ಹೆಸರನ್ನು ನಮೂದಿಸಲಾಗಿದ್ದು, 60 ಅನಾಮಧೇಯ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.
ಘಾಜಿಯಾಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶದ ಕರ್ತವ್ಯ ಪೂರ್ಣಗೊಳಿಸಿದ್ದ ಸುರೇಶ್ ವತ್ಸ್, ವಾಪಸ್ಸಾಗುತ್ತಿದ್ದರು. ಈ ವೇಳೆ ನಿಶಾದ್ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ನಿಶಾದ್ ಪಕ್ಷದ ಕಾರ್ಯಕರ್ತರು, ರಾಜ್ಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.
ಈ ವೇಳೆ ಇಡಿಯ ಪ್ರದೇಶದಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗಿತ್ತು. ಹೀಗಾಗಿ, ಸ್ಥಳದಲ್ಲಿದ ಸುರೇಶ್ ಅವರು ತೆರಳುವಂತೆ ಪ್ರತಿಭಟನಾಕಾರರಿಗೆ ಸೂಚಿಸಿದ್ದಾರೆ. ಇದರಿಂದು ಕೋಪಗೊಂಡ ಪ್ರತಿಭಟನಾಕಾರರು ಕಲ್ಲು ತೂರಾಟ ಆರಂಭಿಸಿದ್ದು, ಈ ವೇಳೆ ಸುರೇಶ್ ಅವರಿಗೆ ಬಲವಾಗಿ ಕಲ್ಲಿನ ಪೆಟ್ಟು ತಗುಲಿ ಸಾವನ್ನಪ್ಪಿದ್ದರು.
Discussion about this post