ಕಲ್ಪ ಮೀಡಿಯಾ ಹೌಸ್ | ಪಡುಬಿದ್ರಿ |
ಪಡೆದ ಸಾಲ ಮರಳಿಸಿಲ್ಲ ಎಂದು ಅರೋಪಿಸಿ ಯಕ್ಷಗಾನ ಕಲಾವಿದರೊಬ್ಬರ #Attack on Yakshagana Artist ಮೇಲೆ ಮೂವರು ದೈಹಿಕ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.
ಈ ಕುರಿತಂತೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಡುಬಿದ್ರಿ ನಿವಾಸಿ, ಸಸಿಹಿತ್ತು ಮೇಳದ ನಿತಿನ್ ಕುಮಾರ್ ಹಲ್ಲೆ ಗೊಳಗಾದವರು. ಸಚಿನ್ ಅಮೀನ್ ಉದ್ಯಾವರ, ಆತನ ತಂದೆ ಕುಶಾಲಣ್ಣ ಹಾಗೂ ಇನ್ನೋರ್ವ ಫೈನಾನ್ಶಿಯರ್ ಆರೋಪಿಗಳಾಗಿದ್ದಾರೆ ಎನ್ನಲಾಗಿದೆ.
Also read: ಅಜ್ಜರಕಾಡು ಕ್ರೀಡಾಂಗಣದಲ್ಲಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಕಚೇರಿ ಉದ್ಘಾಟನೆ

ಬೆತ್ತದಿಂದ ನಿತಿನ್ ಅವರ ಬೆನ್ನಿಗೆ, ತಲೆಗೆ, ಕಾಲಿಗೆ ಹೊಡೆದಿದ್ದಾರೆ. ಕಾಲಿನಿಂದ ತುಳಿದು ಕೈಯಿಂದ ಕೆನ್ನೆಗೆ ಹೊಡೆದು ಖಾಲಿ ಬಾಂಡ್ ಪೇಪರ್’ಗೆ ಬಲಾತ್ಕಾರವಾಗಿ ಸಹಿ ಪಡೆದುಕೊಂಡಿದ್ದಾರೆ. ಸಂಜೆ ವಾಪಸು ಪಡುಬಿದ್ರಿಗೆ ಆರೋಪಿಗಳೇ ಕಳುಹಿಸಿಕೊಟ್ಟಿದ್ದಾರೆ. ಜ. 21ರ ರಾತ್ರಿ ವೇಳೆ ಪುತ್ತೂರಿನಲ್ಲಿ ನಡೆದ ಯಕ್ಷಗಾನಕ್ಕೆ ಹೋಗಿ ಅಲ್ಲಿ ಕೆಲಸ ಮಾಡಿದ್ದ ನಿತಿನ್, ಜ. 22ರಂದು ಪಡುಬಿದ್ರಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಪೊಲೀಸರುಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post