ಇಸ್ಲಾಮಾಬಾದ್: ಭಾರತದ ರಾಜತಾಂತ್ರಿಕ ಚಾಣಾಕ್ಷತನದಿಂದ ಮೋಸ್ಟ್ ವಾಂಟೆಡ್ ಕ್ರಿಮಿನಲ್, ಜೈಶ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್’ನನ್ನು ಜಾಗತಿಕ ಉಗ್ರ ಎಂದು ಘೋಷಣೆ ಮಾಡಿದ ಬೆನ್ನಲ್ಲೇ, ಆತನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಪಾಕಿಸ್ಥಾನ ಸರ್ಕಾರ ಆದೇಶಿಸಿದೆ ಎಂದು ವರದಿಯಾಗಿದೆ.
ಮಸೂದ್’ಗೆ ಸೇರಿದ ಆಸ್ತಿ ಪಾಸ್ತಿಗಳನ್ನು ಮಟ್ಟುಗೋಲು ಹಾಕಿಕೊಳ್ಳುವಂತೆ ಆದೇಶ ನೀಡಿರುವ ಪಾಕ್ ಸರ್ಕಾರ, ಆತನ ಪ್ರಯಾಣದ ಮೇಲೂ ಸಹ ನಿರ್ಬಂಧ ಹೇರಿದೆ.
ನಿನ್ನೆಯಷ್ಟೇ ವಿಶ್ವಸಂಸ್ಥೆ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿ ಘೋಷಣೆ ಹೊರಡಿಸಿತ್ತು. ಇದರ ಬೆನ್ನಲ್ಲೇ ಹೇಳಿಕೆ ನೀಡಿದ್ದ ಪಾಕಿಸ್ತಾನ ಸರ್ಕಾರ ಅಜರ್ ವಿರುದ್ಧ ನಾವು ಸಂಪೂರ್ಣವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿತ್ತು.

















