ಕಲ್ಪ ಮೀಡಿಯಾ ಹೌಸ್ | ಇಸ್ಲಾಮಾಬಾದ್ |
ಶೀಘ್ರದಲ್ಲೇ ಪಾಕ್ ಆಕ್ರಮಿತ ಕಾಶ್ಮೀರ #PakistanOccupiedKashmir ಪ್ರದೇಶವನ್ನು ಭಾರತಕ್ಕೆ ಹಿಂಪಡೆಯುತ್ತೇವೆ ಎಂದು ಕೇಂದ್ರ ನಾಯಕರು ಹಾಗೂ ಸಚಿವರುಗಳು ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ ಪಾಕಿಸ್ತಾನದ #Pakistan ಪರವಾಗಿ ಹೊರಬಿದ್ದಿರುವ ಶಾಕಿಂಗ್ ಸ್ಟೇಟ್ಮೆಂಟ್ ಭಾರತೀಯರಿಗೆ ಗುಡ್ ನ್ಯೂಸ್ ನೀಡಿದ್ದರೆ, ಪಾಕಿಸ್ಥಾನಿಗಳನ್ನು ಅಕ್ಷರಶಃ ತಲ್ಲಣಿಸುವಂತೆ ಮಾಡಿದೆ.
ಹೌದು… ಆಜಾದ್ ಕಾಶ್ಮೀರ #AzamKashmir ಅಥವಾ ಪಾಕ್ ಆಕ್ರಮಿತ ಕಾಶ್ಮೀರ ದೇಶದ ಅವಿಭಾಜ್ಯ ಅಂಗವಲ್ಲ ಎಂದು ಪಾಕಿಸ್ಥಾನದ ಸರ್ಕಾರಿ ವಕೀಲರೊಬ್ಬರು ಇಸ್ಲಾಮಾಬಾದ್ ಹೈಕೋರ್ಟ್’ಗೆ #HighCourt ಹೇಳಿಕೆ ನೀಡಿದ್ದು, ಭಾರತಕ್ಕೆ ಶುಭ ಸುದ್ದಿ ದೊರೆಯುವಂತೆ ಗೋಚರವಾಗಿದೆ.ಪಾಕ್ ಆಕ್ರಮಿತ ಕಾಶ್ಮೀರ ವಿದೇಶಿ ಪ್ರದೇಶವಾಗಿದೆ ಎಂದು ವಕೀಲರು ಪ್ರತಿಪಾದಿಸಿದ್ದಾರೆ. ಈ ಬೆಳವಣಿಗೆ ಇಡೀ ಪಾಕಿಸ್ಥಾನವನ್ನೇ ತಲ್ಲಣಿಸಿದೆ.
State representatives referred to AJK as a “ Foreign Territory “ ! ? Is he saying AJK is under Pakistan’s occupation?
کیا یہ “مقبوضہ کشمیر ہے ؟ https://t.co/XcmfeP6HAc— Abdul Hadi (@HadiAli115) May 31, 2024
ಪಿಒಕೆ ವಿದೇಶಿ ಪ್ರದೇಶವಾಗಿದ್ದು, ಭಾರತದ ಅವಿಭಾಜ್ಯ ಅಂಗವೆಂದು ಪರಿಗಣಿಸಲ್ಪಟ್ಟಿದೆ. ಆದ್ರೆ ಪಾಕಿಸ್ತಾನವು ಆಜಾದ್ ಕಾಶ್ಮೀರ ಎಂದು ಹೇಳಿಕೊಂಡು ಭೂಮಿಯನ್ನು ಆಕ್ರಮಿಸಿಕೊಂಡಿದೆ ಎಂಬುದಾಗಿ ಒತ್ತಿ ಹೇಳಿದ್ದಾರೆ.
ಅಪಹರಣಕ್ಕೊಳಗಾದ ಕವಿ ಹಾಗೂ ಪತ್ರಕರ್ತ ಅಹ್ಮದ್ ಫರ್ಹಾದ್ ಅವರನ್ನ ಜೂನ್ 2ರವರೆಗೆ ಕಾಶ್ಮೀರದಲ್ಲಿ ಬಂಧನದಲ್ಲಿ ಇರಿಸಲಾಗಿದೆ. ಆಜಾದ್ ಕಾಶ್ಮೀರವು ವಿದೇಶಿ ಪ್ರದೇಶ ಆಗಿರುವುದರಿಂದ ಅವರನ್ನ ಇಸ್ಲಾಮಾಬಾದ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದಿಲ್ಲ ಎಂದು ಫೆಡರಲ್ ಪ್ರಾಸಿಕ್ಯೂಟರ್ ಜನರಲ್ ಕೋರ್ಟ್’ಗೆ ತಿಳಿಸಿದ್ದಾರೆ.
ವಕೀಲರ ವಾದಕ್ಕೆ ಇಸ್ಲಾಮಾಬಾದ್ ಹೈಕೋರ್ಟ್ ಆಶ್ಚರ್ಯ ವ್ಯಕ್ತಪಡಿಸಿದೆ. ಆಜಾದ್ ಕಾಶ್ಮೀರವು ವಿದೇಶಿ ಪ್ರದೇಶವಾಗಿದೆ. ಪಾಕಿಸ್ತಾನದ ಅವಿಭಾಜ್ಯ ಭಾಗವಾಗಿದ್ದರೆ, ಪಾಕಿಸ್ತಾನದ ಮಿಲಿಟರಿ ಮತ್ತು ಪಾಕಿಸ್ತಾನಿ ರೇಂಜರ್’ಗಳು ಪಾಕಿಸ್ತಾನದಿಂದ ಇಲ್ಲಿಗೆ ಹೇಗೆ ಪ್ರವೇಶಿಸಿದರು ಎಂದು ಹೇಳಿದೆ
ಈ ವೇಳೆ ಆಜಾದ್ ಕಾಶ್ಮೀರದ ಸ್ಥಾನಮಾನದ ಬಗ್ಗೆ ವಕೀಲರ ಹೇಳಿಕೆಗಳ ಬಗ್ಗೆ ಕೋಪಗೊಂಡ ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ವಿವಿಧ ವ್ಯಕ್ತಿಗಳು ಅವರನ್ನು ಟೀಕಿಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post