ನವದೆಹಲಿ: ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಬೆಂಗಾಲಿ ಚಿತ್ರ ನಿರ್ಮಾಪಕ ಮೃಣಾಲ್ ಸೇನ್(95) ಅವರು ಇಂದು ಇಹಲೋಕ ತ್ಯಜಿಸಿದ್ದು, ಇವರ ನಿಧನಕ್ಕೆ ದೇಶದ ಚಿತ್ರರಂಗ ಕಂಬನಿ ಮಿಡಿದಿದೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಭಾನುವಾರ ಮುಂಜಾನೆ 10.30ರ ಸುಮಾರಿಗೆ ತಮ್ಮ ನಿವಾಸ ಕೋಲ್ಕತಾದ ಭವಾನಿಪೋರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸೇನ್ ನಿಧನಕ್ಕೆ ಕಂಬನಿ ಮಿಡಿದು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತೀಯ ಚಿತ್ರರಂಗಕ್ಕೆ ಅಪರೂಪದ ಚಿತ್ರಗಳನ್ನು ನೀಡಿದ ಪ್ರತಿಭಾನ್ವಿತ ಸೇನ್ ಅವರ ನಿಧನದಿಂದ ತುಂಬಲಾರದ ನಷ್ಟವಾಗಿದೆ ಎಂದಿದ್ದಾರೆ.
Our country is grateful to Shri Mrinal Sen for giving us some of the most memorable films.
The dexterity and sensitivity with which he made films is noteworthy. His rich work is admired across generations.
Saddened by his demise. My thoughts are with his family and admirers.
— Narendra Modi (@narendramodi) December 30, 2018
ಇನ್ನು ಈ ಕುರಿತಂತೆ ಟ್ವೀಟ್ ಮಾಡಿರುವ ಪಶ್ಮಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮೃಣಾಲ್ ಸೇನ್ ಅವರ ನಿಧನದಿಂದ ಸಿನಿಮಾ ರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದಿದ್ದಾರೆ.
Saddened at the passing away of Mrinal Sen. A great loss to the film industry. My condolences to his family
— Mamata Banerjee (@MamataOfficial) December 30, 2018
1923 ಮೇ 14ರಂದು ಬಾಂಗ್ಲಾದೇಶದ ಫರಿದಾಪುರದಲ್ಲಿ ಜನಿಸಿದ್ದ ಮೃಣಾಲ್ ಸೇನ್ ಪ್ರೌಢ ಶಿಕ್ಷಣ ಮುಗಿಸಿದ ನಂತರ ಕೋಲ್ಕತಾಗೆ ಆಗಮಿಸಿ, ಸ್ಕಾಟಿಶ್ ಚರ್ಚ್ ಕಾಲೇಜಿನಲ್ಲಿ ಭೌತಶಾಸ್ತ್ರ ಅಧ್ಯಯನ ಮಾಡಿದರು. ಬಳಿಕ ಕೋಲ್ಕತಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದರು.
‘ಏಕ್ ದಿನ್ ಅಚಾನಕ್’, ‘ಪದಾತಿಕ್’, ‘ಮೃಗಯಾ’, ‘ರಾತ್‌ಭೋರ್’ನಂತಹ ಪ್ರಸಿದ್ಧ ಚಿತ್ರಗಳನ್ನು ನೀಡಿದ್ದ ಸೇನ್ ಅವರಿಗೆ 2003 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.
Discussion about this post