ಕಲ್ಪ ಮೀಡಿಯಾ ಹೌಸ್ | ಪಣಜಿ |
ಪಂಚ ರಾಜ್ಯಗಳ ಚುನಾವಣಾ ಮತ ಎಣಿಕೆ ಇನ್ನೂ ಪ್ರಗತಿಯಲ್ಲಿದ್ದು, ಫಲಿತಾಂಶಕ್ಕೂ ಮುನ್ನವೇ ರಾಜ್ಯಪಾಲರ Governor of Goa ಭೇಟಿಗೆ ಸಮಯ ಕೇಳಿದ್ದ ಅಲ್ಲಿನ ಕಾಂಗ್ರೆಸ್ ನಾಯಕರ ನಡೆ ತೀವ್ರ ಮುಜುಗರಕ್ಕೆ ಈಡಾಗಿದೆ.
ಗೆದ್ದೇ ಗೆಲ್ಲುತ್ತೇವೆ ಎಂಬ ಅತಿಯಾದ ಆತ್ಮವಿಶ್ವಾಸವನ್ನು ಫಲಿತಾಂಶಕ್ಕೂ ಮುನ್ನವೇ ಹೊಂದಿದ್ದ ಗೋವಾ ಕಾಂಗ್ರೆಸ್, ಮಧ್ಯಾಹ್ನದ ನಂತರ ರಾಜ್ಯಪಾಲರ ಭೇಟಿಗೆ ಸಮಯ ಕೇಳಿತ್ತು. ಆದರೆ, ಕೈ ಪಕ್ಷದ ನಿರೀಕ್ಷೆ ಹಾಗೂ ಅತಿಯಾದ ಆತ್ಮವಿಶ್ವಾಸ ಈಗ ಧೂಳಿಪಟವಾಗುವ ಹಾದಿಯಲ್ಲಿದೆ. 19 ಸ್ಥಾನಗಳಲ್ಲಿ ಮುನ್ನಡೆ ಪಡೆದಿರುವ ಬಿಜೆಪಿ ಹಾಗೂ ಮಿತ್ರ ಪಕ್ಷಗಳು ಸರ್ಕಾರ ರಚನೆ ಮಾಡಲು ಹೆಜ್ಜೆಯಿಟ್ಟಿದ್ದು, ರಾಜ್ಯಪಾಲರ ಬಳಿ ಸಮಯ ಕೇಳಿದ್ದಾರೆ ಎಂದು ವರದಿಯಾಗಿದೆ.
ಇದೇ ವೇಳೆ ಇತರೆ ಪಕ್ಷಗಳ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡುವ ಕೊನೆಯ ಸಾಧ್ಯತೆಯನ್ನೂ ಸಹ ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದೂ ಸಹ ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post