ಕಲ್ಪ ಮೀಡಿಯಾ ಹೌಸ್ | ಪ್ಯಾರಿಸ್ |
ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ #Olympics 2024 ಭಾರತಕ್ಕೆ ಮತ್ತೊಂದು ಗರಿ ಮೂಡಿದ್ದು, 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದಲ್ಲಿ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಮತ್ತು ಮನು ಭಾಕರ್ #Sarbjoth Sing-Manu Bhakar ಜೋಡಿ ಕಂಚಿನ ಪದಕವನ್ನು ಗಳಿಸಿದೆ.
ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಮನು ಭಾಕರ್ ಕಂಚಿನ ಪದಕವನ್ನು ಗೆದ್ದುಕೊಂಡಿದ್ದರು. ಈಗ ಮಿಶ್ರ ವಿಭಾಗದಲ್ಲೂ ಮನುಭಾಕರ್ ಪದಕಕ್ಕೆ ಮುತ್ತಿಟ್ಟಿದ್ದಾರೆ. ಈ ಮೂಲಕ ಒಂದೇ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಎರಡು ಪದಕ ಪಡೆದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ದಕ್ಷಿಣ ಕೊರಿಯಾದ ಜೋಡಿಯನ್ನು ಸೋಲಿಸಿ ಭಾರತಕ್ಕೆ 2 ನೇ ಪದಕವನ್ನು ಗೆದ್ದುಕೊಟ್ಟಿದ್ದಾರೆ.
Also read: ವಯನಾಡ್ ಭೂಕುಸಿತ | ಸಾವಿನ ಸಂಖ್ಯೆ 73ಕ್ಕೆ ಏರಿಕೆ | ಹಲವು ಕುಟುಂಬಗಳು ಜಲಸಮಾಧಿ
ಇನ್ನು ಮನು ಭಾಕರ್ 25 ಮೀಟರ್ ಏರ್ ಪಿಸ್ತೂಲ್ ಮಹಿಳಾ ಸ್ಫರ್ಧೆಯಲ್ಲೂ ಭಾಗವಹಿಸುತ್ತಿದ್ದು, ಹೀಗಾಗಿ ಭಾರತೀಯ ನಾರಿಯಿಂದ ಮೂರನೇ ಪದಕ ಕುರಿತು ನಿರೀಕ್ಷೆಗಳು ಹೆಚ್ಚಾಗಿವೆ.
ಮಂಗಳವಾರ ನಡೆದ ಕಂಚಿನ ಪದಕ ಸ್ಪರ್ಧೆಯಲ್ಲಿ ಭಾರತೀಯ ಜೋಡಿ ದಕ್ಷಿಣ ಕೊರಿಯಾದ ಯೆ ಜಿನ್ ಒಹ್ ಮತ್ತು ವೊನೊಹೊ ಲೀ ವಿರುದ್ಧ 16-10 ಅಂಕಗಳಿAದ ಗೆದ್ದು ಕಂಚಿನ ಪದಕ ತನ್ನದಾಗಿಸಿಕೊಂಡಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post