ಕಲ್ಪ ಮೀಡಿಯಾ ಹೌಸ್ | ಪ್ಯಾರಿಸ್ |
ಟೋಕಿಯೋ ಒಲಿಂಪಿಕ್ಸ್’ನಲ್ಲಿ #Tokiyo Olympics ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ಭಾರತದ ಕೀರ್ತಿಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದ ನೀರಜ್ ಚೋಪ್ರಾ, ಪ್ಯಾರಿಸ್ ಒಲಿಂಪಿಕ್ಸ್’ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ದಾಖಲೆ ಬರೆದಿದ್ದಾರೆ.
ಈ ಸಾಧನೆಯ ಮೂಲಕ ಸತತ ಎರಡು ಒಲಿಂಪಿಕ್ಸ್’ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಭಾರತದ ಮೊದಲ ಕ್ರೀಡಾಪಟು ಎಂಬ ದಾಖಲೆಯನ್ನು ನೀರಜ್ ಚೋಪ್ರಾ #Neeraj Chopra ನಿರ್ಮಿಸಿದ್ದಾರೆ.
Also read: ಹೊಸನಗರ | ಘೋರ ಘಟನೆ | 2 ಮಕ್ಕಳನ್ನು ಬಾವಿಗೆ ತಳ್ಳಿ ತಾಯಿಯೂ ಹಾರಿ ಆತ್ಮಹತ್ಯೆ
ನೀರಜ್ ಚೋಪ್ರಾ 89.45 ಮೀಟರ್ ದೂರ ಎಸೆದರೆ ಪಾಕಿಸ್ತಾನದ ಅರ್ಶದ್ ನದೀಂ 92.97 ಮೀಟರ್ ದೂರ ಎಸೆದು ಚಿನ್ನದ ಪದಕ ಪಡೆದರು. ಗ್ರೆನೆಡಾದ ಆ್ಯಂಡರ್ಸನ್ ಪೀಟರ್ 88.54 ಮೀಟರ್ ದೂರ ಥ್ರೋ ಮಾಡಿ ಕಂಚು ಪಡೆದರು.
2020ರ ಟೋಕಿಯೋ ಒಲಿಂಪಿಕ್ಸ್’ನಲ್ಲಿ ಚಿನ್ನದ ಪದಕ ಗೆದ್ದಿದ್ದ ನೀರಜ್ ಈ ಬಾರಿ ಚಿನ್ನದ ಪದಕದ ಮೇಲೆ ಕಣ್ಣಿಟ್ಟಿದ್ದರು. 6 ಅವಕಾಶಗಳ ಪೈಕಿ 5 ಪ್ರಯತ್ನಗಳಲ್ಲಿ ಫೌಲ್ ಆಗಿದ್ದ ನೀರಜ್ ಎರಡನೇ ಪ್ರಯತ್ನದಲ್ಲಿ 89.45 ಮೀಟರ್ ದೂರ ಎಸೆದರು.
ನೀರಜ್ ಚೋಪ್ರಾ ಅವರು ಬೆಳ್ಳಿ ಗೆಲ್ಲುವುದರೊಂದಿಗೆ ಭಾರತ ಈ ಒಲಿಂಪಿಕ್ಸ್’ನಲ್ಲಿ ಒಟ್ಟು ಐದು ಪದಕ ಗೆದ್ದಿದೆ. ಉಳಿದ ನಾಲ್ಕು ಕಂಚಿನ ಪದಕವಾಗಿದ್ದು ಗುರುವಾರ ಹಾಕಿಯಲ್ಲಿ ಸ್ಪೇನ್ ಸೋಲಿಸಿ ಮೂರನೇ ಸ್ಥಾನ ಪಡೆದುಕೊಂಡಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post