ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ #DrDhananjayaSarji ಅವರು ನಗರದ ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು.
ನಗರದ ಅಕ್ಷರ ಸ್ಕೂಲ್ ಮತ್ತು ಕಾಲೇಜಿನಲ್ಲಿ ಅವರು ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಆಡಳಿತ ವರ್ಗ ಮತ್ತು ಸಿಬ್ಬಂದಿಗಳಲ್ಲಿ ಮತ ಯಾಚಿಸಿದರು.

ಜೆಎನ್’ಎನ್’ಸಿಇ ಕಾಲೇಜು
ಇನ್ನು, ಜವಹರಲಾಲ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅವರು ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರು, ಉಪನ್ಯಾಸಕರು, ಆಡಳಿತ ವರ್ಗ ಮತ್ತು ಸಿಬ್ಬಂದಿಗಳಲ್ಲಿ ಮತಯಾಚಿಸಿದರು.

ಸರ್ಜಿ ಗೆಲುವಿಗಾಗಿ ವಿಶೇಷ ಪೂಜೆ
ಡಾ.ಧನಂಜಯ ಸರ್ಜಿ ಅವರ ಗೆಲುವಿಗಾಗಿ ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.

ಈ ವೇಳೆ ಮಹಾನಗರ ಪಾಲಿಕೆ ಸದಸ್ಯ ಪ್ರಭಾಕರ್, ಯುವ ಮುಖಂಡ ವರುಣ್ ಸೇರಿದಂತೆ ಅಭಿಮಾನಿಗಳು ಪಾಲ್ಗೊಂಡಿದ್ದರು.

ಶಿವಮೊಗ್ಗ ಗ್ರಾಮಾಂತರ ಬಿಜೆಪಿ ವತಿಯಿಂದ ಮತದಾರರ ಸಭೆ ಶುಕ್ರವಾರ ಸಮೀಪದ ಮತ್ತೂರು ಗ್ರಾಮದಲ್ಲಿ ನಡೆಯಿತು.
ಸಭೆಯಲ್ಲಿ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪಟ್ಟಾಭಿರಾಮ್ ಜೀ, ಹಿರಿಯ ನಾಯಕರು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಂ.ಬಿ. ಭಾನುಪ್ರಕಾಶ್, ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಸ್. ದತ್ತಾತ್ರಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಎಚ್. ಮಾಲತೇಶ್, ಹಿರಿಯ ಮುಖಂಡರಾದ ಶಿವನಂಜಪ್ಪ, ಮಹಾಶಕ್ತಿ ಅಧ್ಯಕ್ಷರಾದ ಅಜಯ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post