ನ್ಯೂಯಾರ್ಕ್: ಅನಾರೋಗ್ಯದ ಹಿನ್ನೆಲೆಯಲ್ಲಿ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು, ಜೂನ್ 15ರ ಶುಕ್ರವಾರ ರಾಜ್ಯಕ್ಕೆ ಮರಳಲಿದ್ದಾರೆ.
ಈ ಕುರಿತಂತೆ ಮಾಹಿತಿ ತಿಳಿದುಬಂದಿದ್ದು, ಪರಿಕ್ಕರ್ ಬಹುತೇಕ ಗುಣಮುಖರಾಗಿದ್ದಾರೆ ಎನ್ನಲಾಗಿದೆ.
ಪ್ಯಾಕ್ರಿಯಾಟಿಕ್ ಕ್ಯಾನ್ಸರ್ನಿಂದ ಬಳಲುತ್ತಿರುವ ಪರಿಕ್ಕರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಮ್ಮ ಚಿಕಿತ್ಸೆ ಕುರಿತಂತೆ ಕಳೆದ ತಿಂಗಳು ವೀಡಿಯೋ ಬಿಡುಗಡೆ ಮಾಡಿದ್ದ ಪರಿಕ್ಕರ್, ತಾನು ಆರೋಗ್ಯವಾಗಿದ್ದೇನೆ ಎಂಬ ಮಾಹಿತಿ ನೀಡಿದ್ದರು.
Discussion about this post