ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಸರ್ಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸದ ಹಿನ್ನೆಲೆ ಮಂಗಳವಾರದಿಂದ ರಾಜ್ಯದಲ್ಲಿ KSRTC ನೌಕರರ ಮುಷ್ಕರ ನಡೆಯಲಿದ್ದು, ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ನಾಳೆ ಬಳೆಗ್ಗೆ 6 ಗಂಟೆಯಿಂದಲೆ ಸರ್ಕಾರಿ ಬಸ್ಸುಗಳು ರಸ್ತೆಗಿಳಿಯುವುದಿಲ್ಲ ಎಂದು ನೌಕರರು ತಿಳಿಸಿದ್ದಾರೆ.
ಈಡೇರಿಸುವಂತೆ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಕೆಎಸ್‌ಆರ್‌ಟಿಸಿ ನೌಕರರು ಆಗಸ್ಟ್ 5ರಿಂದ ಮಷ್ಕರಕ್ಕೆ ಆರಂಭವಾಗಲಿದೆ.
ಶಿವಮೊಗ್ಗದಲ್ಲಿ ಹೇಗಿರುತ್ತೆ ಮುಷ್ಕರ, ಯಾರಿಗೆಲ್ಲಾ ಸಮಸ್ಯೆ?
ಶಿವಮೊಗ್ಗ ಜಿಲ್ಲೆಯಲ್ಲಿ ಬಹುತೇಕ ಮಾರ್ಗಗಳಲ್ಲಿ ಖಾಸಗಿ ಬಸ್ಸುಗಳು ಸಂಚರಿಸುತ್ತವೆ. ಆದ್ದರಿಂದ ಜಿಲ್ಲೆಯಲ್ಲಿ ದೊಡ್ಡಮಟ್ಟಿಗೆ ಪರಿಣಾಮ ಬೀರುವುದಿಲ್ಲ ಎಂದು ಅಂದಾಜಿಸಲಾಗಿದೆ. ಆದರೆ ಮುಷ್ಕರದಿಂದ ವಿವಿಧ ವರ್ಗದ ಜನರಿಗೆ ಸಮಸ್ಯೆ ಆಗಲಿದೆ.
ಶಿವಮೊಗ್ಗ-ಭದ್ರಾವತಿ ಮಾರ್ಗ ಸೇರಿದಂತೆ ದೂರದ ಊರುಗಳಿಗೆ ತೆರಳುವವರಿಗೆ, ಶಕ್ತಿ ಯೋಜನೆ ಅಡಿ ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಚೇರಿ, ಅಂಗಡಿಗಳ ಕೆಲಸಕ್ಕೆ ತೆರಳುವ ಮಹಿಳೆಯರು, ಪಾಸ್ ಹೊಂದಿರುವ ನೌಕರರು, ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಲಿದೆ.
ಯಾವುದೇ ನೌಕರರು ನಾಳೆ ಬಸ್ ಗಳನ್ನು ಓಡಿಸುವುದಿಲ್ಲ ಎಂದರಲ್ಲದೇ ಸರ್ಕಾರದ ಬೆದರಿಕೆಗೆ ಹೆದರಬೇಡಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸಿ. ಬಾಕಿ ಹಣ ಕೊಡಬೇಕು, ಶೇಕಡ 15ರಷ್ಟು ವೇತನ ಹೆಚ್ಚಳ ಮಾಡಬೇಕು. ಬೇಕಿದ್ದರೆ ಕಂತಿನ ರೂಪದಲ್ಲಿ ಬಾಕಿ ಕೊಡಿ ಎಂದು ಮನವಿ ಮಾಡಿದ್ದೇವೆ. 12 ಬೇಡಿಕೆಗಳ ಪೈಕಿ ಎರಡು ಪ್ರಮುಖ ಬೇಡಿಕೆಗಳನ್ನಾದರೂ ಈಡೇರಿಸಬೇಕಿತ್ತು. ಅಧಿವೇಶನದವರೆಗೆ ಮುಷ್ಕರ ಮುಂದೂಡಿ ಎಂದು ಹೇಳಿದ್ದಾರೆ. ನಾವು ಒಪ್ಪಿಲ್ಲ. ಹೀಗಾಗಿ ನಾಳೆ ಬೆಳಗ್ಗೆ ೬ ಗಂಟೆಯಿಂದ ಸಾರಿಗೆ ಮುಷ್ಕರ ನಡೆಸಲಾಗುವುದು.
-ಆನಂತ ಸುಬ್ಬರಾವ್, ಅಧ್ಯಕ್ಷರು, ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post