ಕಲ್ಪ ಮೀಡಿಯಾ ಹೌಸ್ | ಪಾಟ್ನಾ |
ಕಳೆದ 24 ಗಂಟೆಗಳಲ್ಲಿ ಬಿಹಾರದಲ್ಲಿ ಸಿಡಿಲು #Thunder ಬಡಿದು ಕನಿಷ್ಠ 15 ಮಂದಿ ಸಾವನ್ನಪ್ಪಿದ್ದು, ಪಾಟ್ನಾ ಮತ್ತು ವೈಶಾಲಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಎಚ್ಚರಿಕೆ ನೀಡಿದೆ.
ಔರಂಗಾಬಾದ್‌ನಲ್ಲಿ. ಜೆಹಾನಾಬಾದ್‌ನ, ಸರನ್, ರೋಹ್ತಾಸ್, ನಳಂದಾ ಮತ್ತು ಜಮುಯಿ ಜಿಲ್ಲೆಗಳಲ್ಲಿ ಸಿಡಿಲು ಬಡಿದು 15 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಔರಂಗಾಬಾದ್‌ನಲ್ಲಿ ನಾಲ್ವರು. ಜೆಹಾನಾಬಾದ್‌ನ ತಾಂಡ್ವಾ ಪ್ರದೇಶದ ಸರೇನ್ ಗ್ರಾಮದಲ್ಲಿ ಭತ್ತದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರು, ಸರನ್‌ನ ಮಾಂಝಿ ಪೊಲೀಸ್ ಠಾಣೆ ವ್ಯಾಪ್ತಿಯ ನರ್ವನ್ ಗ್ರಾಮದಲ್ಲಿ 48 ವರ್ಷದ ವ್ಯಕ್ತಿಯೊಬ್ಬರು ದನ ಮೇಯಿಸಲು ಊರ ಹೊರಗೆ ಹೋಗಿದ್ದ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಹಾಗೂ ರಾಂಪುರ ಕಾಲಾ ಗ್ರಾಮದಲ್ಲಿ 16 ವರ್ಷದ ಬಾಲಕ ಮತ್ತು ಸರನ್‌ನ ಗರ್ಖಾ ಪೊಲೀಸ್ ಠಾಣೆ ವ್ಯಾಪ್ತಿಯ ಕಸಿನಾ ಗ್ರಾಮದ ೧೪ ವರ್ಷದ ಬಾಲಕ ಸಿಡಿಲಿಗೆ ಬಲಿಯಾಗಿದ್ದಾರೆ. ರೋಹ್ತಾಸ್ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದು, ನಳಂದಾ ಮತ್ತು ಜಮುಯಿಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
4 ಲಕ್ಷ ರೂ. ಪರಿಹಾರ ಘೋಷಣೆ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ #Nithish Kumar ಅವರು ಮೃತರ ಕುಟುಂಬಕ್ಕೆ ತಲಾ ೪ ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು, ಜನರು, ವಿಪತ್ತು ನಿರ್ವಹಣಾ ಇಲಾಖೆ ನೀಡುವ ಸೂಚನೆಗಳನ್ನು ಪಾಲಿಸಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post