ಕಲ್ಪ ಮೀಡಿಯಾ ಹೌಸ್ | ಪಾಟ್ನಾ |
ನವೆಂಬರ್ 6 ಮತ್ತು ನವೆಂಬರ್ 11 ರಂದು ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ #Bihara Assembly Election ಭಾರತೀಯ ಜನತಾ ಪಕ್ಷ 101 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಖ್ಯಾತ ಗಾಯಕಿ ಮೈಥಿಲಿ ಠಾಕೂರ್’ಗೆ #Singer Maithili Thakur ಟಿಕೇಟ್ ನೀಡಲಾಗಿದೆ.
ಬಿಜೆಪಿ 101 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದು, 17 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದೆ. ಇನ್ನೂ ಜೆಡಿಯು ಕೂಡ 101 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಉಳಿದಂತೆ ಚಿರಾಗ್ ಪಾಸ್ವಾನ್ ನೇತೃತ್ವದ ಎಲ್ಜೆಪಿ 29, ಎಚ್’ಎಎಂ 6 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ.
ಇಂಡಿಯಾ ಮೈತ್ರಿಕೂಟದ ಕಾಂಗ್ರೆಸ್, ಆರ್’ಜೆಡಿ ಪಕ್ಷಗಳು ಅಧಿಕೃತವಾಗಿ ಯಾವುದೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಇನ್ನೂ ಸೀಟು ಹಂಚಿಕೆ ಕಸರತ್ತು ನಡೆಯುತ್ತಿದೆ. ಆದ್ರೆ ಕಾಂಗ್ರೆಸ್ ಸೀಟು ಹಂಚಿಕೆಗೆ ಮುನ್ನವೇ 16 ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ ಎಂದು ತಿಳಿದುಬಂದಿದೆ.
ನಿನ್ನೆಯಷ್ಟೇ ಕೇಸರಿ ಪಕ್ಷ ಸೇರಿದ ಜಾನಪದ ಗಾಯಕಿ ಮೈಥಿಲಿ ಠಾಕೂರ್ ಅವರು ಅಲಿನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಬಕ್ಸಾರ್’ನಿಂದ ಮಾಜಿ ಐಪಿಎಸ್ ಅಧಿಕಾರಿ ಆನಂದ್ ಮಿಶ್ರಾ ಅವರನ್ನು ಕಣಕ್ಕಿಳಿಸಲಾಗಿದೆ.
ಇಂದು ಬಿಡುಗಡೆಯಾದ ಪಟ್ಟಿಯ ಪ್ರಕಾರ, ರಾಮಚಂದ್ರ ಪ್ರಸಾದ್ ಅವರು ಹಯಾಘಾಟ್ ಕ್ಷೇತ್ರದಿಂದ, ಛೋಟಿ ಕುಮಾರಿ ಅವರು ಛಪ್ರಾದಿಂದ ಮತ್ತು ರಾಕೇಶ್ ಓಜಾ ಅವರು ಶಹಪುರದಿಂದ ಸ್ಪರ್ಧಿಸಲಿದ್ದಾರೆ.
ಬೀರೇಂದ್ರ ಕುಮಾರ್ ಮತ್ತು ಮಹೇಶ್ ಪಾಸ್ವಾನ್ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ರೋಸೆರಾ ಹಾಗೂ ಅಗಿಯಾನ್ ಕ್ಷೇತ್ರಗಳಿಂದ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.
ರಂಜನ್ ಕುಮಾರ್ ಮುಜಫಪುರದಿಂದ ಮತ್ತು ಸುಭಾಷ್ ಸಿಂಗ್ ಅವರು ಗೋಪಾಲ್’ಗಂಜ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post