ಕಲ್ಪ ಮೀಡಿಯಾ ಹೌಸ್ | ಪಾಟ್ನಾ |
ಇಲ್ಲಿನ ಕನ್ವರ್ ಯಾತ್ರೆ ವೇಳೆ ನಡೆಯುತ್ತಿದ್ದ ಡಿಜೆ ವಾಹನಕ್ಕೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿದ ಪರಿಣಾಮವಾಗಿ 9 ಮಂದಿ ಯಾತ್ರಿಗಳು ದುರಂತ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಬಿಹಾರದ ವೈಶಾಲಿಯಲ್ಲಿ ನಡೆದಿದೆ.
ಸುಲ್ತಾನ್ಪುರ ಗ್ರಾಮದ ಯುವಕರನ್ನು ಒಳಗೊಂಡ ತಂಡವು ಸೋನ್ಪುರ ಬಾಬಾ ಹರಿಹರನಾಥದಲ್ಲಿ ಜಲಾಭಿಷೇಕ ಮಾಡಲು ಗಂಗಾಜಲವನ್ನು ಹೊತ್ತು ಸರನ್ ಪಹೇಲಜಾಘಾಟ್’ಗೆ ತೆರಳುತ್ತಿತ್ತು.
Also read: ಬೆಂಗಳೂರು | ಸಿಸಿಬಿ ಅಧಿಕಾರಿ ತಿಮ್ಮೇಗೌಡ ಆತ್ಮಹತ್ಯೆ | ಕಾರಣವೇನು?
ಡಿಜೆ ಹಾಡುಗಳೊಂದಿಗೆ ಮೆರವಣಿಗೆ ತೆರಳುತ್ತಿದ್ದ ವೇಳೆ 11,000 ವೋಲ್ಟ್’ನ ಹೈಟೆನ್ಷನ್ ತಂತಿಗೆ ಡಿಜೆ ವಾಹನದ ಮೇಲ್ಭಾಗ ತಗುಲಿ ದುರಂತ ಸಂಭವಿಸಿದೆ. ಪರಿಣಾಮವಾಗಿ 9 ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದು, 10ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಆರು ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಹಾಜಿಪುರ ಕೈಗಾರಿಕಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post