ಕಲ್ಪ ಮೀಡಿಯಾ ಹೌಸ್ | ಪಾಟ್ನಾ |
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ #Bihara Assembly Election ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ #Nitish Kumar ಅವರು ಗುರುವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಇಂದು ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಎನ್‌ಡಿಎ ಬಲಪ್ರದರ್ಶನದ ನಡುವೆ ನಿತೀಶ್ ಕುಮಾರ್ ಅವರು ದಾಖಲೆಯ 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, #PM Narendra Modi ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಇತರ ಹಲವಾರು ಕೇಂದ್ರ ಸಚಿವರು ಮತ್ತು 11 ಎನ್‌ಡಿಎ-ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post