ಕಲ್ಪ ಮೀಡಿಯಾ ಹೌಸ್ | ಪಾಟ್ನಾ |
ಇಂದು ಮುಂಜಾನೆ ಸಂಭವಿಸಿದ ಸರಣಿ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರೂ ಸೇರಿ ಒಂಬತ್ತು ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ಕೈಮೂನೂರ್’ನಲ್ಲಿ ಸಂಭವಿಸಿದೆ.
ಇಬ್ಬರು ಮಹಿಳೆಯರು ಸೇರಿದಂತೆ 8 ಮಂದಿ ಜೀಪಿನಲ್ಲಿ ಪ್ರಯಾಣಿಸುತ್ತಿದ್ದರು. ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಬೈಕ್’ಗೆ ಈ ಜೀಪ್ ಡಿಕ್ಕಿ ಹೊಡೆದಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಬೃಹತ್ ಟ್ರಕ್ ಈ ಬೈಕ್ ಹಾಗೂ ಜೀಪಿಗೆ ಡಿಕ್ಕಿ ಹೊಡೆದಿದೆ.
Also read: ಬೆಂಗಳೂರು | ದರ್ಶನ್ ಅಭಿಮಾನಿಗಳ ರ‍್ಯಾಲಿಗೆ ಪೊಲೀಸರ ನಿರಾಕರಣೆ
ಅಪಘಾತದ ರಭಸಕ್ಕೆ ಬೈಕ್ ಸವಾರ ಹಾಗೂ ಜೀಪಿನಲ್ಲಿದ್ದವರು ಸೇರಿ ಒಂಬತ್ತು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಟ್ರಕ್ ಬಿಟ್ಟು ಚಾಲಕ ಪರಾರಿಯಾಗಿದ್ದು, ಟ್ರಕ್ಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post